ಶಿವಮೊಗ್ಗ : ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಾಹಿತ್ಯ ಹುಣ್ಣಿಮೆಯ 225ನೇ ಕಾರ್ಯಕ್ರಮ ಮೇ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಕ. ಸಾ. ಪ. ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರೊಂದಿಗೆ ನಡೆದ ಸಮಾಲೋಚನೆಯ ನಂತರ ಪೂಜ್ಯರ ಮಾರ್ಗದರ್ಶನದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ನಡೆದಿದೆ. ಅಲ್ಲಿ ಆಯ್ಕೆಯಾದವರು ಸೇರಿದಂತೆ ನಾಡಿನಾದ್ಯಂತ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಪಿ. ಯು. ವರೆಗೆ ಓದುತ್ತಿರುವ ಮಕ್ಕಳು ಭಾಗವಹಿಸಲು ಅವಕಾಶವಿದೆ.
ಮಕ್ಕಳು ತಾವು ಬರೆದ ಸ್ವಂತ ಕವನ, ಕಥೆ, ಪ್ರಬಂಧಗಳ ಜೊತೆಗೆ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಶಾಲೆ ಮತ್ತು ತಂದೆ, ತಾಯಿಯ ಒಪ್ಪಿಗೆ ಪಡೆದು ಕಳುಹಿಸಲು ಕೋರಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳು, ಪೋಷಕರಿಗೆ ವಸತಿ, ಊಟ ಹಾಗೂ ಉಪಾಹಾರದ ವ್ಯವಸ್ಥೆ ಮಾಡಲಾಗುವುದು. ನೋಂದಾಯಿಸಿದವರಿಗೆ ಮಾತ್ರ ಅವಕಾಶ.
ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿಯಿರುವ ಮಕ್ಕಳು ದಿನಾಂಕ 10-05-2024ರ ಒಳಗಾಗಿ ಡಿ. ಮಂಜುನಾಥ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಆರ್. ಟಿ. ಓ. ಕಚೇರಿ ರಸ್ತೆ, ಶಿವಮೊಗ್ಗ 577204 ಇಲ್ಲಿಗೆ ತಲುಪುವಂತೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 9449552795