Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಸಾಹಿತ್ಯ ಹುಣ್ಣಿಮೆ 225ನೇ ತಿಂಗಳ ಸಂಭ್ರಮ ಶಿವಮೊಗ್ಗದಲ್ಲಿ
    Literature

    ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಸಾಹಿತ್ಯ ಹುಣ್ಣಿಮೆ 225ನೇ ತಿಂಗಳ ಸಂಭ್ರಮ ಶಿವಮೊಗ್ಗದಲ್ಲಿ

    April 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಾಹಿತ್ಯ ಹುಣ್ಣಿಮೆಯ 225ನೇ ಕಾರ್ಯಕ್ರಮ ಮೇ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಕ. ಸಾ. ಪ. ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ.

    ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರೊಂದಿಗೆ ನಡೆದ ಸಮಾಲೋಚನೆಯ ನಂತರ ಪೂಜ್ಯರ ಮಾರ್ಗದರ್ಶನದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

    ‌ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ನಡೆದಿದೆ. ಅಲ್ಲಿ ಆಯ್ಕೆಯಾದವರು ಸೇರಿದಂತೆ ನಾಡಿನಾದ್ಯಂತ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಪಿ. ಯು. ವರೆಗೆ ಓದುತ್ತಿರುವ ಮಕ್ಕಳು ಭಾಗವಹಿಸಲು ಅವಕಾಶವಿದೆ.
    ಮಕ್ಕಳು ತಾವು ಬರೆದ ಸ್ವಂತ ಕವನ, ಕಥೆ, ಪ್ರಬಂಧಗಳ ಜೊತೆಗೆ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಶಾಲೆ ಮತ್ತು ತಂದೆ, ತಾಯಿಯ ಒಪ್ಪಿಗೆ ಪಡೆದು ಕಳುಹಿಸಲು ಕೋರಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳು, ಪೋಷಕರಿಗೆ ವಸತಿ, ಊಟ ಹಾಗೂ ಉಪಾಹಾರದ ವ್ಯವಸ್ಥೆ ಮಾಡಲಾಗುವುದು. ನೋಂದಾಯಿಸಿದವರಿಗೆ ಮಾತ್ರ ಅವಕಾಶ.

    ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿಯಿರುವ ಮಕ್ಕಳು ದಿನಾಂಕ 10-05-2024ರ ಒಳಗಾಗಿ ಡಿ. ಮಂಜುನಾಥ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಆರ್. ಟಿ. ಓ. ಕಚೇರಿ ರಸ್ತೆ, ಶಿವಮೊಗ್ಗ 577204 ಇಲ್ಲಿಗೆ ತಲುಪುವಂತೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 9449552795

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ಪಂಚಮ ಪದ : ಹಾಡು ಅಕ್ಷರಗಳ ಬೆನ್ನೆತ್ತಿ
    Next Article ಧಾರವಾಡದಲ್ಲಿ ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಮಹಾಧಿವೇಶನ -2024’ | ಏಪ್ರಿಲ್ 29 ಮತ್ತು 30
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.