ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಸಹಯೋಗದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ರಾಜ್ಯಮಟ್ಟದ ದಸರಾ ಕಾವ್ಯ ಸಂಭ್ರಮವನ್ನು ದಿನಾಂಕ 18 ಅಕ್ಟೋಬರ್ 2026ರಂದು ಬೆಳಗ್ಗೆ 10-30 ಗಂಟೆಗೆ ಶಿವಮೊಗ್ಗ ಶರಾವತಿ ನಗರದ ಕಾಳಿಕಾಂಬ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ರಾಜ್ಯದ 65 ಕವಿಗಳ ಕವನ ವಾಚನ ಹಾಗೂ 25 ತಂಡಗಳ ಜನಪದ ವೃಂದಗಾಯನ ಸ್ಪರ್ಧೆ ಒಳಗೊಂಡ ಈ ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮ ನಡೆಯಲಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳ ಕವಿಗಳಿಂದ 125 ಕವನಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 65 ಕವನಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕವಿಗಳು ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಇವರ ಸಾನ್ನಿಧ್ಯದಲ್ಲಿ, ನಾದಮಯಾನಂದನಾಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಬೆಳಗಿನ ಕವಿಗೋಷ್ಠಿ ನಡೆಯಲಿದೆ. ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ ಉದ್ಘಾಟಿಸಲಿದ್ದು, ಸಾಹಿತಿ ಡಾ. ಸರ್ಫ್ರಾಜ್ ಚಂದ್ರಗುತ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ. ಮಂಜುನಾಥ ಆಶಯ ನುಡಿಗಳನ್ನಾಡಲಿದ್ದಾರೆ. ಎರಡನೇ ಕವಿಗೋಷ್ಠಿಯನ್ನು ಕವಯಿತ್ರಿ ಹಾಗೂ ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಉದ್ಘಾಟಿಸಲಿದ್ದು, ಸಾಹಿತಿ ಎಂ. ನವೀನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 3-30 ಗಂಟೆಗೆ ಜನಪದ ಹಾಡುಗಳ ವೃಂದಗಾಯನ ಸ್ಪರ್ಧೆ ನಡೆಯಲಿದೆ. ಪುಷ್ಪಾ ಶಿವಕುಮಾರ್ ಉದ್ಘಾಟಿಸಲಿದ್ದು, ಡಿ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಏರಿಯಾ ಜಿ ರಾಷ್ಟ್ರೀಯ ಉಪಾಧ್ಯಕ್ಷೆ ಶಶಿಕಲಾ ಕೆ.ಎಸ್. ಬಹುಮಾನ ವಿತರಿಸಲಿದ್ದಾರೆ. ಡಾ. ಶಾಂತಾ ಸುರೇಂದ್ರ ಹಾಗೂ ಎನ್. ದಿನೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ 25 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದೆ.
ಜನಪದ ಕಲೆಗಳ ಉಳಿವು ಮತ್ತು ಬೆಳವಣಿಗೆಯ ಉದ್ದೇಶದಿಂದ ಕರ್ನಾಟಕ ಜಾನಪದ ಪರಿಷತ್ತು ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಿಗೆ ಜನಪದ ಕಲಿಕಾ ಶಿಬಿರಗಳನ್ನು ನಡೆಸುತ್ತಿದೆ. ಶಿಬಿರಗಳಲ್ಲಿ ತರಬೇತಿ ಪಡೆದವರಿಗೆ ಜಿಲ್ಲಾ ಜಾನಪದ ಸಮ್ಮೇಳನ ಮತ್ತು ದಸರಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಒಗಟು ಹಾಗೂ ಗಾದೆ ಹೇಳುವ ಸ್ಪರ್ಧೆಗಳನ್ನೂ ಆಯೋಜಿಸಲಾಗಿದೆ. ಜನಪದ ಕಲೆಗಳ ಉಳಿವು ಮತ್ತು ಬೆಳವಣಿಗೆಯ ಉದ್ದೇಶದಿಂದ ಕರ್ನಾಟಕ ಜಾನಪದ ಪರಿಷತ್ತು ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಿಗೆ ಜನಪದ ಕಲಿಕಾ ಶಿಬಿರಗಳನ್ನು ನಡೆಸುತ್ತಿದೆ. ಶಿಬಿರಗಳಲ್ಲಿ ತರಬೇತಿ ಪಡೆದವರಿಗೆ ಜಿಲ್ಲಾ ಜಾನಪದ ಸಮ್ಮೇಳನ ಮತ್ತು ದಸರಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

