Subscribe to Updates

    Get the latest creative news from FooBar about art, design and business.

    What's Hot

    ಸಿವಗಂಗ ರಂಗಮಂದಿರದಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ತಾಲೀಮು | ಜುಲೈ 09

    July 6, 2026

    ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8

    July 6, 2026

    ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ

    July 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಗ್ರಾಮದಲ್ಲಿ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ
    Felicitation

    ಕನ್ನಡ ಗ್ರಾಮದಲ್ಲಿ ರಾಜ್ಯಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ

    July 6, 2026No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡ ಪ್ರಥಮ ಪತ್ರಿಕೆಯು ಪ್ರಾರಂಭಗೊಂಡಿತ್ತು. ಈ ದಿನ ಕೇರಳ-ಕರ್ನಾಟಕ ಮಹಾರಾಷ್ಟ್ರ ರಾಜ್ಯದಾದ್ಯಂತ 183ನೇ ವರ್ಷದ ಕನ್ನಡ ಪತ್ರಿಕೋದ್ಯಮ ವರ್ಷಾಚರಣೆ, ಕನ್ನಡ ಪತ್ರಿಕಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಮಂಗಳೂರಿನಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿಯ ಆಶ್ರಯದಲ್ಲಿ ನಡೆದ ಕನ್ನಡ ಪತ್ರಿಕೋದ್ಯಮದ 142ನೇ ವರ್ಷಾಚರಣೆಯ ಸಂದರ್ಭದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯವ್ಯಾಪ್ತಿಯನ್ನು ಒಳಗೊಂಡು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಫ್ರೀಲಾನ್ಸ್ ಪತ್ರಕರ್ತ ಶಿವರಾಮ ಕಾಸರಗೋಡು ಸಂಸ್ಥಾಪಕ ಅಧ್ಯಕ್ಷರಾಗಿ 1985 ಜುಲೈ 1ರಂದು ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘವನ್ನು ಅಂದಿನ ಕರ್ನಾಟಕ ಪತ್ರಿಕಾ ಅಕಾಡೆಮಿ ಅಧ್ಯಕ್ಷ ಜಿ. ನಾರಾಯಣ ಬೆಂಗಳೂರು ಉದ್ಘಾಟಿಸಿದರು.

    ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 01 ಜುಲೈ 2026ರಂದು ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದಲ್ಲಿ 183ನೇ ವರ್ಷದ ಕನ್ನಡ ಪತ್ರಿಕೋದ್ಯಮ ವರ್ಷಾಚರಣೆ, ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆ, ಕನ್ನಡ ಪತ್ರಿಕಾ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಲೇಖಕ, ಪತ್ರಿಕಾ ಅಂಕಣಕಾರ, ಪ್ರಕಾಶಕ, ವಿಷ್ಣು ಕೆ.ಶ್ಯಾನುಭೋಗ್ ಕೂಡ್ಲು ವಹಿಸಿದ್ದರು.

    ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ- ಮತ್ತು ಇತಿಹಾಸದ ಕುರಿತು ವಿಶೇಷೋಪನ್ಯಾಸವನ್ನು ಕವಿ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ನೀಡಿದರು. ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕಾ ವಿತರಕರಿಗೆ ಸನ್ಮಾನ, ನೂತನವಾಗಿ ಆಯ್ಕೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು, ಸಾಧಕರಾದ ಜಯಾನಂದ ಕುಮಾರ್ ಹೊಸದುರ್ಗ, ಕಾಸರಗೋಡು, ವಿಷ್ಣು ಕೆ. ಶ್ಯಾನುಭೋಗ್ ಕೂಡ್ಲು, ಗಣೇಶ್ ಪಾರೆಕಟ್ಟೆ ಇವರಿಗೆ ರಾಜ್ಯ ಮಟ್ಟದ ಕನ್ನಡ ಪತ್ರಿಕಾ ದಿನಾಚರಣೆಯ ಗೌರವ ಪ್ರಶಸ್ತಿಯನ್ನು ಶಾಲು, ಪ್ರಶಸ್ತಿ ಫಲಕದೊಂದಿಗೆ ನೀಡಿ ಅಭಿನಂದನೆ ಸಲ್ಲಿಸಲಾಯಿತು.

    ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕಟವಾಗುವ ಕನ್ನಡ ದಿನ ಪತ್ರಿಕೆಗಳ ಪ್ರದರ್ಶನವನ್ನು ಏರ್ಪಡಿಸಿ, ಕನ್ನಡ ಪತ್ರಿಕಾ ಪ್ರತಿಜ್ಞೆಯನ್ನು ರಂಗ ನಿರ್ದೇಶಕ, ಗಾಯಕ ದಿವಾಕರ ಪಿ. ಅಶೋಕ ನಗರ ಬೋಧಿಸಿದರು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8ರಂದು ಐತಿಹಾಸಿಕ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ, ಕೇರಳ – ಕರ್ನಾಟಕ ಉತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಕೇರಳ – ಕರ್ನಾಟಕ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಕಾಸರಗೋಡು ಕನ್ನಡ ಪತ್ರಿಕಾ ಮ್ಯೂಸಿಯಂ ಮತ್ತು ಸಾರ್ವಜನಿಕ ಸಂಪರ್ಕ – ಡಿಜಿಟಲ್ ಕನ್ನಡ ಪತ್ರಿಕಾ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗುವುದು. ಈಗಾಗಲೇ ಕಾಸರಗೋಡು ಜಿಲ್ಲೆಯಲ್ಲಿ ನೋಂದಾವಣೆಗೊಂಡಿರುವ ವಾರ ಪತ್ರಿಕೆ, ಪಾಕ್ಷಿಕ ಪತ್ರಿಕೆ, ಮಾಸ ಪತ್ರಿಕೆಯ ಪ್ರಕಾಶಕರು, ಸಂಪಾದಕರನ್ನು ಗುರುತಿಸಿ ಪತ್ರಿಕೆಯನ್ನು ಪುನರ್ ಆರಂಭಿಸಲು ಚಿಂತನೆ ನಡೆಸಲಾಗುವುದು ಎಂದರು.

    ಮುಖ್ಯ ಅತಿಥಿಯಾಗಿ ಪ್ರೊ. ಎ. ಶ್ರೀನಾಥ ಕಾಸರಗೋಡು, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನಿರ್ದೇಶಕ ಕೆ.ವಿ. ರಮೇಶ ಕಾಸರಗೋಡು, ನಗರ ಸಭಾ ಮಾಜಿ ಕೌನ್ಸಿಲರ್ ಕೆ. ವರಪ್ರಸಾದ ಕೋಟೆಕಣಿ, ಕೆ.ಸಿ.ಎನ್. ಚಾನಲ್ ನಿರ್ದೇಶಕ ಪುರುಷೋತ್ತಮ ಎಂ. ನಾಯ್ಕ್ ಭಾಗವಹಿಸಿದ್ದರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ಸ್ವಾಗತಿಸಿ, ಕುಶಲ ಕುಮಾರ ಕೆ. ಕನ್ನಡ ಗ್ರಾಮ ಧನ್ಯವಾದ ನೀಡಿದರು. ಅನುಷಾ ಕೆ., ಕೃಪಾನಿಧಿ ಕೆ. ಕಾರ್ಯಕ್ರಮ ನಿರೂಪಿಸಿದರು.

    ಕಾಸರಗೋಡು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಜಿಲ್ಲಾ ಪತ್ರಿಕೆಗಳಿಗೆ ಕಾರ್ಯನಿರತ ಪತ್ರಕರ್ತರಾಗಿ ಫ್ರೀಲಾನ್ಸ್ ಪತ್ರಕರ್ತರಾಗಿ, ಹವ್ಯಾಸಿ ಪತ್ರಕರ್ತರಾಗಿ ಅರೆಕಾಲಿಕ ವರದಿಗಾರನಾಗಿ, ನಿರಂತರವಾಗಿ ಪತ್ರಿಕಾ ಬರಹದ ಮೂಲಕ ಗುರುತಿಸಿಕೊಳ್ಳುವವರು ಹಾಗೂ ವಿವಿಧ ಸುದ್ದಿ ವಾಹಿನಿಗಳು, ಪತ್ರಿಕಾ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ರೀಲಾನ್ಸ್ ಪತ್ರಕರ್ತರು, ಮಾಧ್ಯಮ ಮಿತ್ರರು ಭಾಗವಹಿಸಿದ್ದರು. ಫ್ರೀಲಾನ್ಸ್ ಪತ್ರಕರ್ತರ ಸಂಘದ ಆಶ್ರಯದಲ್ಲಿ ಶೀಘ್ರದಲ್ಲಿ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಿಕೆಗಳಿಗೆ ಪತ್ರಿಕಾ ವರದಿ, ಸುದ್ದಿಯನ್ನು ಕಳುಹಿಸುವ ಕುರಿತು ಪತ್ರಿಕಾ ಬರವಣಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳ ಆಧ್ಯಾಪಕರು, ವಿದ್ಯಾರ್ಥಿಗಳು, ಮಾಧ್ಯಮ ವಕ್ತಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

    ಸಂಪರ್ಕ : ಶಿವರಾಮ ಕಾಸರಗೋಡು, ಸಂಸ್ಥಾಪಕ- ಅಧ್ಯಕ್ಷರು, ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘ, ಕನ್ನಡ ಗ್ರಾಮ, ಕಾಸರಗೋಡು -671121. ಮೊಬೈಲ್ -9448572016

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ -16’ ಕೊಂಕಣಿ ಕವಿಗೋಷ್ಠಿ
    Next Article ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಅರ್ಥಾಂಕುರ-23’
    roovari

    Add Comment Cancel Reply


    Related Posts

    ಸಿವಗಂಗ ರಂಗಮಂದಿರದಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ತಾಲೀಮು | ಜುಲೈ 09

    July 6, 2026

    ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8

    July 6, 2026

    ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ

    July 6, 2026

    ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಅಭಿನಯ ಕಾರ್ಯಾಗಾರ’ಕ್ಕೆ ಚಾಲನೆ

    July 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.