ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ‘ಕೊಡವ ಕಥೆ ಜೊಪ್ಪೆ’ಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಿದೆ. ಸುಮಾರು 25ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು.
ಕತೆಗಳು ಎ4 ಅಳತೆಯ ಕಾಗದದಲ್ಲಿ ಸ್ಪುಟವಾಗಿ, 5-6 ಪುಟಗಳನ್ನು ಮೀರದಂತಿರಬೇಕು. ಕಥಾವಸ್ತು ಕತೆಗಾರರ ಕಲ್ಪನೆಗೆ ಬಿಟ್ಟಿದ್ದು. ಕತೆಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ‘ಯಾರದ್ದು ತೇಜೋವಧೆಯಾಗಲಿ ಅಥವಾ ಜಾತಿ-ಧರ್ಮಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವಂತಿರಬಾರದು. ಸಾಧಕ-ಭಾದಕಗಳಿಗೆ ಕತೆಗಾರರೇ ಜವಾಬ್ದಾರರು.
ಕತೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ-ಪದ್ಧತಿ, ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ. ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತು ಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು ತಮ್ಮ ಸ್ವಪರಿಚಯವನ್ನು 4-5 ವಾಕ್ಯಗಳಿಗೆ ವೀರದಂತೆ ಬರೆದು ಕಳುಹಿಸಬೇಕು. ಪ್ರತಿಯೊಬ್ಬ ಕಥೆಗಾರರು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು.
ಕತೆಗಳನ್ನು ಕಳುಹಿಸಿಕೊಡಲು 20 ಸೆಪ್ಟೆಂಬರ್ 2024ಕೊನೆ ದಿನವಾಗಿದ್ದು, ಒಂದಕ್ಕಿಂತ ಹೆಚ್ಚಿನ ಕತೆಗಳನ್ನು ಕಳುಹಿಸುವಂತಿಲ್ಲ. ‘ಕೊಡವ ಕಥೆ ಜೊಪ್ಪೆಗೆ’ ನಿಮ್ಮ ಕಥೆಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಭವನ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಮತ್ತು ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಸಿ.ಗಿರೀಶ್ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleದಾಸೋಹಿ ಪ್ರಶಸ್ತಿಗೆ ಹರಿಕೃಷ್ಣ ಪುನರೂರು ಆಯ್ಕೆ
Related Posts
Comments are closed.