ಸುಂಟಿಕೊಪ್ಪ : ನಾಕೂರು ಶಿರಂಗಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜಿಕೆರೆ ಸಮುದಾಯ ಭವನದಲ್ಲಿ ತಲಕಾವೇರಿ ಜ್ಞಾನವಿಕಾಸ ತಂಡದ ವತಿಯಿಂದ ಬೀದಿ ನಾಟಕದ ಮೂಲಕ ಸಾಮಾಜಿಕ ಅರಿವು ಮೂಡಿಸುವ ಕಾರ್ಯಕ್ರಮವು ದಿನಾಂಕ 02-06-2024ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಾನ್‌ಬೈಲ್ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಲಾಕಾವೇರಿ ಜ್ಞಾನವಿಕಾಸ ತಂಡದಿಂದ ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ, ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಿವಾಹ ನಡೆಸುವುದರಿಂದ ಮುಂದಾಗುವ ದುಷ್ಪಾರಿಣಾಮ, ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿ ಹಾಗೂ ತಮ್ಮ ಸುತ್ತಮುತ್ತಲಿನಲ್ಲಿ ಹಸಿರು ಪರಿಸರವನ್ನು ಸಂರಕ್ಷಿಸುವ ವಿಚಾರದ ಕುರಿತು ಬೀದಿನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಚಂದ್ರಶೇಖರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾನ್‌ಬೈಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಮೂರ್ತಿ, ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮಾ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷೆ ಖತೀಜ, ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಉಪಸ್ಥಿತರಿದ್ದರು. ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೂ ಉಪಸ್ಥಿತರಿದ್ದರು.