Subscribe to Updates

    Get the latest creative news from FooBar about art, design and business.

    What's Hot

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಶ್ರದ್ಧಾಂಜಲಿ
    Uncategorized

    ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಶ್ರದ್ಧಾಂಜಲಿ

    April 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಮಂಗಳೂರು : ಕಲ್ಕೂರ ಪ್ರತಿಷ್ಠಾನವು ಆಯೋಜಿಸಿದ್ದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 27-04-2024ರಂದು ಮಂಗಳೂರಿನ ಎಂ. ಜಿ. ರಸ್ತೆಯಲ್ಲಿರುವ ಕಲ್ಕೂರ ಪ್ರತಿಷ್ಠಾನದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದ ಪ್ರಸಿದ್ದ ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ “ಸದಾ ಉಲ್ಲಾಸದಿಂದಿದ್ದ ಉತ್ಕೃಷ್ಟ ಭಾಗವತರಾಗಿ ಸಜ್ಜನಿಕೆಯಿಂದ ಸುಬ್ರಹ್ಮಣ್ಯ ಧಾರೇಶ್ವರರು ತನ್ನದೇ ಹಾದಿಯಲ್ಲಿ ಪ್ರಸಿದ್ಧರಾದವರು. ಅವರ ಅಕಾಲಿಕ ನಿಧನ ಸಮಗ್ರ ಗಾನ ಲೋಕಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಅನೇಕ ಹೊಸ ಪ್ರಸಂಗಗಳಿಗೆ ಜೀವ ತುಂಬಿ ಮೆರೆಸಿದ ಪ್ರಯೋಗಶೀಲರೂ ಆಗಿದ್ದ ಧಾರೇಶ್ವರರು ಓರ್ವ ಅಪೂರ್ವ ಭಾಗವತರು.” ಎಂದವರು ಸ್ಮರಿಸಿದರು.

    ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿ “ದಿವಂಗತ ಕಾಳಿಂಗ ನಾವಡರ ನಿಧನದ ಬಳಿಕ ಅಷ್ಟೇ ಯೋಗ್ಯತೆಯ ಕಲಾವಿದನಾಗಿ ಬಡಗು ತಿಟ್ಟಿನಲ್ಲಿ ಹೆಸರುಗಳಿಸಿದ ಭಾಗವತರ ಸಾಲಿನಲ್ಲಿ ಧಾರೇಶ್ವರರು ಅಗ್ರಗಣ್ಯರೆನಿಸುತ್ತಾರೆ.” ಎಂದು ಗುಣಗಾನಗೈದರು.

    ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ಯಕ್ಷಗಾನ ರಂಗದಲ್ಲಿ ಶತಮಾನದ ಧ್ವನಿಯಾಗಿ ಕಾಣಿಸಿಕೊಂಡ ಬೆರಳೆಣಿಕೆಯ ಭಾಗವತರರ ಪೈಕಿ ಧಾರೇಶ್ವರರು ಪ್ರಮುಖರು.” ಎಂದರು.

    ಹರಿದಾಸ ಮಹಾಬಲ ಶೆಟ್ಟಿ ಕೂಡ್ಲು, ಯಕ್ಷಗಾನ ಕಲಾವಿದ ಸಂಜಯ ಕುಮಾರ ಶೆಟ್ಟಿ ಗೋಣಿಬೀಡು, ಜನಾರ್ದನ ಹಂದೆ, ಸುಧಾಕರ ರಾವ್ ಪೇಜಾವರ, ಯಕ್ಷಗುರು ಅಶೋಕ್ ಬೋಳೂರು, ರವಿ ಅಲೆವೂರಾಯ, ಶಿವಪ್ರಸಾದ್ ಪ್ರಭು, ಮಧುಸೂದನ ಅಲೆವೂರಾಯ, ಪೂರ್ಣಿಮಾ ರಾವ್ ಪೇಜಾವರ, ಜೂ. ರಾಜ್ ಕುಮಾರ್ ಜಗದೀಶ್ ಶಿವಪುರ, ಎಡ್ವರ್ಡ್ ಲೋಬೊ ಮೊದಲಾದವರು ಉಪಸ್ಥಿತರಿದ್ದು ಪುಷ್ಪ ನಮನ ಸಲ್ಲಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ 2023ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳ ಆಹ್ವಾನ
    Next Article ಕನ್ನಡ ಭವನದಲ್ಲಿ ‘ಚಿಣ್ಣರ ಮೇಳ’ ಬೇಸಿಗೆ ಶಿಬಿರದ ಉದ್ಘಾಟನೆ
    roovari

    Add Comment Cancel Reply


    Related Posts

    ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ

    February 24, 2026

    ಭಾಸ್ಕರ ರೈ ಕುಕ್ಕುವಳ್ಳಿಯವರ ‘ಕಲ್ಲುರ್ಟಿ ಕಥನ’ ನಮ್ಮ ಕೊಂಬಾರು ಯೂಟ್ಯೂಬ್ ನಲ್ಲಿ ಬಿಡುಗಡೆ

    January 29, 2026

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.