ಉಡುಪಿ : ಯಕ್ಷಗಾನ ಕೇಂದ್ರ, ಶಿವಪ್ರಭಾ ಇಂದ್ರಾಳಿ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಪ್ರಸಂಗ ‘ಸುಧನ್ವ ಕಾಳಗ’ ಯಕ್ಷಗಾನ ಪ್ರದರ್ಶನವು ದಿನಾಂಕ 28 ಜೂನ್ 2026ರಂದು ಸಂಜೆ 4-00 ಗಂಟೆಗೆ ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯರು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ, ಗುರುವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

