ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ‘ಸಂಕಲ್ಪ ಕನ್ನಡ ಸಂಘ’ ಕನ್ನಡ ವಿಭಾಗ ಇದರ ಆಶ್ರಯದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಹಾಗೂ ಕೃತಿ ಬಿಡುಗಡೆ’ ಕಾರ್ಯಕ್ರಮವು ದಿನಾಂಕ 05-05-2023ನೇ ಶುಕ್ರವಾರ ಅಪರಾಹ್ನ ಗಂಟೆ 02:00ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ವಹಿಸಲಿದ್ದು, ಸ.ಪ್ರ.ದ.ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ಶ್ರೀ ಸತೀಶ್ ಕೆ. ಆರ್. ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಸಾಹಿತಿ ಡಾ.ಬಿ. ಪ್ರಭಾಕರ ಶಿಶಿಲ ಇವರು ‘ಕನ್ನಡದ ಅಸ್ಮಿತೆ – ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಅದೇ ದಿನ ಕ.ಸಾ.ಪ. ಜಿಲ್ಲಾ ಪ್ರತಿನಿಧಿಯಾದ ಶ್ರೀ ರಾಮಚಂದ್ರ ಪಲ್ಲತಡ್ಕರವರ ಉಪಸ್ಥಿತಿಯಲ್ಲಿ ಡಾ.ಬಿ. ಪ್ರಭಾಕರ ಶಿಶಿಲರ ನಾಟಕ ಕೃತಿ ‘ಅಮರ ಸುಳ್ಯದ ಕ್ರಾಂತಿ 1837’ನ್ನು ಸುಳ್ಯದ ಸ.ಪ್ರ.ದ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಶಿ ಎಂ.ಆರ್. ಬಿಡುಗಡೆ ಮಾಡಲಿದ್ದಾರೆ.
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸ.ಪ್ರ.ದ. ಕಾಲೇಜು ಸುಳ್ಯ ಇವರು ತಮಗೆಲ್ಲರಿಗೂ ಆದರದ ಸ್ವಾಗತ ಬಯಸುತ್ತಾರೆ.