ಬೈಂದೂರು : ಸುರಭಿ (ರಿ.) ಬೈಂದೂರು ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿಷ್ಠಾನ ಇವರ ರಜತ ವರ್ಷದ ಸಂಭ್ರಮದಲ್ಲಿ ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ದಿನಾಂಕ 17 ಜನವರಿ 2026ರಂದು ಸಂಜೆ 6-30 ಗಂಟೆಗೆ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಶಾರದಾ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆ ಯನ್ನು ಮಾನ್ಯ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಇವರು ವಹಿಸಲಿದ್ದು, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಇವರು ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿ ಪುರಸ್ಕೃತ ನಾಟಕ ‘ಶಿವೋಹಂ’ ಪ್ರದರ್ಶನಗೊಳ್ಳಲಿದೆ.

