Subscribe to Updates

    Get the latest creative news from FooBar about art, design and business.

    What's Hot

    ‘ಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 31

    January 20, 2026

    ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2026’ | ಜನವರಿ 24, 25 ಮತ್ತು 26

    January 20, 2026

    ಶ್ರೋತೃವರ್ಗವನ್ನು ಮಂತ್ರಮುಗ್ಧರನ್ನಾಗಿಸಿದ ‘ಲಯ ಲಾವಣ್ಯ’ ವಿಶೇಷ ಸಂಗೀತ ಸಂಭ್ರಮ

    January 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಸಿ. ರೋಡಿಗೆ ಆಗಮಿಸಿದ ಸುವರ್ಣ ಕರ್ನಾಟಕ ರಥಯಾತ್ರೆಗೆ ತಾಲೂಕು ಆಡಳಿತ ಹಾಗೂ ಕ.ಸಾ.ಪ.ದಿಂದ ಸ್ವಾಗತ
    Kannada

    ಬಿ.ಸಿ. ರೋಡಿಗೆ ಆಗಮಿಸಿದ ಸುವರ್ಣ ಕರ್ನಾಟಕ ರಥಯಾತ್ರೆಗೆ ತಾಲೂಕು ಆಡಳಿತ ಹಾಗೂ ಕ.ಸಾ.ಪ.ದಿಂದ ಸ್ವಾಗತ

    October 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಕರ್ನಾಟಕದ ಸುವರ್ಣ ಸಂಭ್ರಮದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಬಂಟ್ವಾಳ ತಾಲೂಕಿಗೆ ದಿನಾಂಕ 2 ಅಕ್ಟೋಬರ್ 2024ರಂದು ಪ್ರವೇಶಿಸಿದ್ದು, ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸಹಿತ ನಾನಾ ಇಲಾಖೆಗಳ ವತಿಯಿಂದ ಗೌರವಪೂರ್ಣವಾಗಿ ಸ್ವಾಗತಿಸಲಾಯಿತು.

    ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಇವರು, ಕರ್ನಾಟಕದ ಸಾಧಕರು, ಸಂಸ್ಕೃತಿಯ ದೃಶ್ಯಾವಳಿಯನ್ನು ಒಳಗೊಂಡಿರುವ ಸುವರ್ಣ ಕರ್ನಾಟಕ ರಥದಲ್ಲಿರುವ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

    ಈ ಸಂದರ್ಭ ಮಾತನಾಡಿದ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್, ಕರ್ನಾಟಕವೆಂದು ಹೆಸರಾಗಿ ರಾಜ್ಯ ಐವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಥ ಸಾಗುತ್ತಿದ್ದು, ನಮ್ಮ ನೆಲ, ಜಲ, ವಿಚಾರಗಳನ್ನು ಅರಿಯಲು ಇದು ಸಾಧ್ಯವಾಗುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಮಾರ್ಗದರ್ಶನ ಮಂಡಳಿ ಸದಸ್ಯ ಹರೀಶ ಮಾಂಬಾಡಿ ಮಾತನಾಡಿ, “ದೈನಂದಿನ ಕಾರ್ಯನಿರ್ವಹಣೆಯ ಸಂದರ್ಭವೂ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ನೆಲದ ಸಂಸ್ಕೃತಿಯನ್ನು ಉಳಿಸಬೇಕಾಗಿದೆ” ಎಂದರು.

    ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ಬಂಟ್ವಾಳ ನಗರ ಠಾಣೆ ಇನ್ಸ್ ಪೆಕ್ಟರ್ ಅನಂತಪದ್ಮನಾಭ, ಉಪತಹಸೀಲ್ದಾರ್ ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ಜನಾರ್ದನ, ತಾಲೂಕು ಪಂಚಾಯಿತಿ ಅಧಿಕಾರಿ ಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಸದಸ್ಯ ಪೂವಪ್ಪ ನೇರಳಕಟ್ಟೆ, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ. ಮುಹಮ್ಮದ್, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಕಾರ್ಯಕಾರಿ ಸಮಿತಿ ಸದಸ್ಯರಾದ ರಜನಿ ಚಿಕ್ಕಯ್ಯಮಠ, ನಾನಾ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಆನೆಗುಡ್ಡೆ ವಿನಾಯಕ ದೇಗುಲದಲ್ಲಿ ಹೂವಿನಕೋಲು ಉದ್ಘಾಟನೆ
    Next Article ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಅಕ್ಟೋಬರ್ 7, 14, 21 ಮತ್ತು 28
    roovari

    Comments are closed.

    Related Posts

    ‘ಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 31

    January 20, 2026

    ಹಿಟ್ಟಿನಹಳ್ಳಿಯಲ್ಲಿ ವಿಜಯಪುರ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 20 ಮತ್ತು 21

    January 20, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಾಳೆಂಬ ವ್ರತ’

    January 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶಕ್ತಿ’ ವಿಚಾರ ಸಂಕಿರಣ

    January 19, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.