Subscribe to Updates

    Get the latest creative news from FooBar about art, design and business.

    What's Hot

    ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಸಂಗೀತ ಕಛೇರಿ ಮತ್ತು ಭರತನಾಟ್ಯ | ಮಾರ್ಚ್ 07

    March 4, 2026

    ಬೆಂಗಳೂರಿನ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ‘ಚಂದ್ರಗಿರಿ ತೀರದಲ್ಲಿ’ ನಾಟಕ ಪ್ರದರ್ಶನ | ಮಾರ್ಚ್ 10

    March 4, 2026

    ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಮಾರ್ಚ್ 05

    March 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಡಾ. ರಾಮಕೃಷ್ಣ ಶಿರೂರು ಇವರು ‘ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025’ ಪ್ರಶಸ್ತಿಗೆ ಆಯ್ಕೆ
    Awards

    ಡಾ. ರಾಮಕೃಷ್ಣ ಶಿರೂರು ಇವರು ‘ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025’ ಪ್ರಶಸ್ತಿಗೆ ಆಯ್ಕೆ

    December 26, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಇಲ್ಲಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರು ‘ಸ್ವಾಮಿ ವಿವೇಕಾನಂದ ರಾಷ್ಟ್ರ ಪ್ರಶಸ್ತಿ- 2025’ಕ್ಕೆ ಆಯ್ಕೆಯಾಗಿದ್ದಾರೆ ಎಂದು ಸ್ನೇಹಜೀವಿ ಫೌಂಡೇಶನ್ ಮಹಾರಾಷ್ಟ್ರ ಮತ್ತು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕನ್ಯಾಳ ತಿಳಿಸಿದ್ದಾರೆ.ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 12 ಜನವರಿ 2025ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಇದರ ಸಭಾ ಭವನದಲ್ಲಿ ನಡೆಯಲಿದೆ.

    ಎಂ. ಎ. ಬಿ. ಎಡ್. ಪದವೀಧರರಾದ ಡಾ. ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತಃ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಕ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರ.
    1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 1995ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಅಕ್ಷರ ದೀಪ ಫೌಂಡೇಶನ್ ಕರ್ನಾಟಕ ಇದರ ಪ್ರವೀಣ್ ಕುಮಾರ್ ಕನ್ಯಾಳ ಪತ್ರಿಕಾ ಪ್ರಕಟನೆಯ ಮೂಲಕ ಡಾ.ರಾಮಕೃಷ್ಣ ಶಿರೂರು ಇವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಂಗಣದಲ್ಲಿ ಗಡಿಗಳನ್ನು ಮೀರಿದ ಸಂಗೀತ
    Next Article ಖ್ಯಾತ ಮಲಯಾಳ ಸಾಹಿತಿ ವಾಸುದೇವನ್ ನಾಯರ್ ನಿಧನ
    roovari

    Add Comment Cancel Reply


    Related Posts

    ಅರೆಭಾಷಾ ಅಕಾಡೆಮಿಯಿಂದ 2025ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

    March 4, 2026

    ಮಾಣಿಕ್ಯ ಪ್ರಕಾಶನದ 2026ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    March 3, 2026

    ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ ‘ರಂಗಭೂಮಿ ರಂಗೋತ್ಸವ’ | ಮಾರ್ಚ್ 04ರಿಂದ 08

    March 2, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.