Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆ
    Music

    ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ವತಿಯಿಂದ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆ

    September 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ 17ನೇ ವಾರ್ಷಿಕೋತ್ಸವದ ಅಂಗವಾಗಿ ‘ಸ್ವರ ಕುಡ್ಲ ಸೀಸನ್- 6’ ಸಂಗೀತ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಜ್ಯೋತಿಷಿ ಗಾಯಕ ಶ್ರೀ ಉದಯಕುಮಾರ್ ಮಾತನಾಡಿ “ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು” ಎಂದು ಅಭಿಪ್ರಾಯಪಟ್ಟರು.

    ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮ.ನ.ಪಾ. ಮಾಜಿ ಮಹಾ ಪೌರರಾದ ದಿವಾಕರ್ ಪಾಂಡೇಶ್ವರ್, ಮ.ನ.ಪಾ. ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ. ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು.

    ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್, ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ ಹಾಗೂ ಸುಭಾಷಿತ್ ಕುಮಾರ್, ಮುಕ್ತಾ ರಾವ್, ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರ ಧನ್ಯ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ. ಸೌಮ್ಯ ಭಟ್ ಸಹಕರಿಸಿದರು. ಶೀಶಾನ್ ಕೌಡೂರು ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಗೋವಿಂದ ದಾಸ ಕಾಲೇಜಿನಲ್ಲಿ ವಿದ್ಯಾರ್ಥಿ ಸೆನೆಟ್ ಮತ್ತು ಲಲಿತಕಲಾ ಸಂಘದ ಉದ್ಘಾಟನೆ
    Next Article ಮಂಜನಾಡಿಯಲ್ಲಿ ಉದ್ಘಾಟನೆಗೊಂಡ ಯಕ್ಷಗಾನ ನಾಟ್ಯ ತರಗತಿ
    roovari

    Comments are closed.

    Related Posts

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.