ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ನಡೆಯುವ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 19 ಜುಲೈ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿರಿಗೆರೆಯ ತರಳಬಾಳು ಕಲಾ ಸಂಘದ ಕಲಾವಿದರು ಅಭಿನಯಿಸುವ ಬೋಳುವಾರು ಮಹಮದ್ ಕುಂಞ ಇವರ ಕೃತಿಯಾಧಾರಿತ ನಾಟಕ ‘ಸ್ವಾತಂತ್ರ್ಯದ ಓಟ’ ಪ್ರದರ್ಶನಗೊಳ್ಳಲಿದೆ.
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ. ಚಿಕ್ಕಣ್ಣ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.