ಮಂಗಳೂರು : ಕರ್ನಾಟಕ ಗಾಂಧಿ ಸ್ಮಾರಕನಿಧಿ, ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಕುಂಬ್ರ ಜತ್ತಪ್ಪ ರೈ ಪ್ರತಿಷ್ಠಾನ ಕಜೆಮಾರು ಕೆದಂಬಾಡಿ ಪುತ್ತೂರು ಸಹಭಾಗಿತ್ವದಲ್ಲಿ ‘ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ’ ಸಮಾರಂಭ ದಿನಾಂಕ 01-09-2023ರಂದು ಪೂರ್ವಾಹ್ನ 10ಕ್ಕೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
‘ಸರ್ವ ಸಮಾನತೆ-ಗಾಂಧೀಜಿ ವಿಚಾರಧಾರೆಯ ಪ್ರಸ್ತುತತೆ’ ಹಾಗೂ ‘ನಾಗರಿಕ ಸೇವೆಯಲ್ಲಿ ಸ್ವಚ್ಛತೆ ಮತ್ತು ಪ್ರಾಮಾಣಿಕತೆ’ ಎಂಬ ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ಇದೇ ವೇದಿಕೆಯಲ್ಲಿ ‘ಸಮಾನತೆಗಾಗಿ ಸಂಘರ್ಷ’ ಮತ್ತು ‘ಮಣ್ಣಿಗೆ ಮರಳುವ ಮುನ್ನ’ ಎಂಬ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.
ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರಾದ ಸನ್ಮಾನ್ಯ ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕನಿಧಿಯ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ ಪ್ರಸ್ತಾವನೆ ಮಾಡಲಿದ್ದಾರೆ. ಮಂಗಳೂರು ವಿ.ವಿ.ಉಪಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸುವರು.
ಸ್ಪೀಕರ್ ಯು.ಟಿ.ಖಾದರ್, ಕೇರಳ ಮಾಜಿ ಸಚಿವರು ಎಂ.ಎ.ಬೇಬಿ, ಮಾಜಿ ಸಂಸದ ಪಿ.ಕರುಣಾಕರನ್, ಹಿರಿಯ ನಾಯಕ ಎ.ಕೆ.ಗೋಪಾಲನ್ ಇವರ ಪುತ್ರಿ ಶ್ರೀಮತಿ ಲೈಲಾ ಕರುಣಾಕರನ್, ಶ್ರೀ ವಿ.ಬಾಲಸುಬ್ರಮಣ್ಯನ್, ನಿವೃತ್ತ ಸೆಂಟ್ರಲ್ ಆಡಳಿತ ಟ್ರಿಬ್ಯೂನಲ್ ಸದಸ್ಯ ಶ್ರೀ ಸುಧೀರ್ ಕುಮಾರ್ ಅತಿಥಿಗಳಾಗಿರುವರು.