ಮಂಗಳೂರು : ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ನಡೆಸುತ್ತಿರುವ ‘ನೃತ್ಯಾಮೃತ 12’ ಸರಣಿ ಕಾರ್ಯಕ್ರಮದ ಅಂಗವಾಗಿ ‘ಭರತನಾಟ್ಯದೊಳಗಿನ ಧ್ವನಿ ಬೆಳಕು’ ಎಂಬ ಪ್ರಾತ್ಯಕ್ಷಿಕೆ ಸಹಿತ ವಿಚಾರ ಸಂಕಿರಣ – ಸಂವಾದವನ್ನು ಆಯೋಜಿಸಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ದಿನಾಂಕ 18 ನವಂಬರ್ 2024ರ ಸೋಮವಾರದಂದು ಬೆಳಗ್ಗೆ 9-30 ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಈ ಕಾರ್ಯಾಗಾರವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಉದ್ಘಾಟಿಸಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾದ ರೆ. ಡಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಸಂಘದ ನಿರ್ದೇಶಕಿಯಾಗಿರುವ ಶ್ರೀಮತಿ ಸುಭದ್ರಾ ರಾವ್, ನೃತ್ಯ ಸೌರಭ ನಾಟ್ಯಾಲಯ ಉಳ್ಳಾಲದ ನಿರ್ದೇಶಕರಾದ ವಿದ್ವಾನ್ ಪ್ರಮೋದ್ ಉಳ್ಳಾಲ್ ಭಾಗವಹಿಸಲಿದ್ದು, ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪ್ರಖ್ಯಾತ ರಂಗಭೂಮಿ ಕಲಾವಿದ, ನಿರ್ದೇಶಕ ಮತ್ತು ಬೆಳಕುತಜ್ಞರಾದ ಶ್ರೀ ಕ್ರಿಸ್ಟೋಫರ್ ಡಿಸೋಜ ನೀನಾಸಂ ಇವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.
ಶಿಬಿರಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದ್ದು ಆಸಕ್ತರು (9686801878) ಹೆಸರು ನೋಂದಾಯಿಸಬಹುದೆಂದು ಸಂಸ್ಥೆಯ ನಿರ್ದೇಶಕಿ ಗುರು ವಿದುಷಿ ಸುಮಂಗಲಾ ರತ್ನಾಕರ್ ರಾವ್, ಟ್ರಷ್ಟಿ ಶ್ರೀ ಬಿ. ರತ್ಮಾಕರ ರಾವ್ ಮತ್ತು ಸಂಘಟನಾ ಕಾರ್ಯದರ್ಶಿ ಶ್ರೀ ಶಶಿರಾಜ್ ರಾವ್ ಕಾವೂರು ತಿಳಿಸಿದ್ದಾರೆ.