9 ಮಾರ್ಚ್ 2023 ಮಂಗಳೂರು: ಟಿ. ಸುನಂದಮ್ಮ ಸ್ಮಾರಕ ಪ್ರತಿಷ್ಠಾನ ನೀಡುವ “ಟಿ. ಸುನಂದಮ್ಮ ಪ್ರಶಸ್ತಿ”ಗೆ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆಯಾಗಿದ್ದಾರೆ. ಹಾಸ್ಯ ಸಾಹಿತಿ ಟಿ. ಸುನಂದಮ್ಮ ಅವರ ಸ್ಮರಣಾರ್ಥ ಈ ಪ್ರತಿಷ್ಠಾನವು ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿಯು ರೂ.30,000/- ನಗದು ಹಾಗೂ ಸ್ಮರಣ ಫಲಕಗಳನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 18ರ ಸಂಜೆ 5-00 ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನೆರವೇರಲಿದೆ. ಹಾಸ್ಯ ಬರಹಗಾರ ಎಂ.ಎಸ್. ನರಸಿಂಹ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಮಂಗಳೂರಿನಲ್ಲಿ ತುಳು ಜಾನಪದ ನಾಟಕ “ಗೋಂದೊಳು”
Next Article ಮಾರ್ಚ್ 12ರಂದು ಬೆಂಗಳೂರಿನಲ್ಲಿ ಅಬ್ಬಕ್ಕ ಉತ್ಸವ
