ತೆಕ್ಕಟ್ಟೆ : ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆ ಇದರ ಆಶ್ರಯದಲ್ಲಿ ಪ್ರಸಾದ್ ಕುಮಾರ್ ಮೊಗೆಬೆಟ್ಟು ವಿರಚಿತ ಡಾ. ಜಗದೀಶ್ ಶೆಟ್ಟಿ ಸಿದ್ಧಾಪುರ ಸಾರಥ್ಯದಲ್ಲಿ ಅರ್ಥಾಂಕುರ -13 ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕುಂದಾಪ್ರ ಕನ್ನಡದಲ್ಲಿ ‘ತಾಳಮದ್ದಲೆ’ ಕಾರ್ಯಕ್ರಮವನ್ನು ದಿನಾಂಕ 27 ಜುಲೈ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಸಾದ್ ಕುಮಾರ್ ಮೊಗೆಬೆಟ್ಟು ವಿರಚಿತ ‘ರಾಜಿ ರಂಗ’ ತಾಳಮದ್ದಲೆಯ ಹಿಮ್ಮೇಳದಲ್ಲಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ರಾಹುಲ್ ಕುಂದರ್ ಕೋಡಿ ಮತ್ತು ರಾಹುಲ್ ಅಮೀನ್ ಕೊಮೆ ಹಾಗೂ ಹಿಮ್ಮೇಳದಲ್ಲಿ ಡಾ. ಜಗದೀಶ್ ಶೆಟ್ಟಿ, ಸತೀಶ್ ಶೆಟ್ಟಿ ಮೂಡುಬಗೆ, ರಾಘವೇಂದ್ರ ತುಂಗ ಕೋಟ, ಶಂಕರ ನಾರಾಯಣ ಉಪಾಧ್ಯಾಯ ಕೊರ್ಗಿ, ಸುಧಾ ಮಣೂರು ಮತ್ತು ನಾಗರತ್ನ ಹೇರ್ಳೆ ಸಹಕರಿಸಲಿದ್ದಾರೆ.