ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮಾಸಿಕ ತಾಳಮದ್ದಲೆ ಕೂಟ ‘ಮಾಗಧ ವಧೆ’ ಎಂಬ ಆಖ್ಯಾನದೊಂದಿಗೆ ದಿನಾಂಕ 17 ಮಾರ್ಚ್ 2026ನೇ ಮಂಗಳವಾರ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಸತೀಶ್ ಇರ್ದೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಮುರಳೀಧರ ಕಲ್ಲೂರಾಯ, ಅನೀಶ ಕೃಷ್ಣ ಪುಣಚ, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಮಾಗಧ), ದುಗ್ಗಪ್ಪ ನಡುಗಲ್ಲು (ಧರ್ಮರಾಯ), ಬಡೆಕ್ಕಿಲ ಚಂದ್ರಶೇಖರ ಭಟ್ (ಭೀಮ), ಅಚ್ಯುತ ಪಾಂಗಣ್ಣಾಯ (ಅರ್ಜುನ) ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ವಿಜಯ ಸರ್ವಿಸ್ ಮಾಲೀಕ ಮಂಜುನಾಥ ಭಟ್ ಪ್ರಾಯೋಜಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ವಂದಿಸಿದರು.

