ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಅಲ್ಲಿನ ವಸ್ತು ಪ್ರದರ್ಶನ ಮಂಟಪದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ವಿಂಶತಿ ಸಂಭ್ರಮದ 15ನೇ ಸರಣಿ ತಾಳಮದ್ದಳೆಯು ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’ ಎಂಬ ಆಖ್ಯಾನದೊಂದಿಗೆ ದಿನಾಂಕ 28 ನವೆಂಬರ್ 2024ರಂದು ಜರಗಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ. ಜಗನ್ನಿವಾಸ ರಾವ್ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾ ರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಹರಿಣಾಕ್ಷಿ ಜೆ. ಶೆಟ್ಟಿ (ವೃದ್ಧ ಬ್ರಾಹ್ಮಣ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು. ಶ್ರೀಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು ಹಾಗೂ ಸ್ವಯಂ ಸೇವಕರು ಸಹಕರಿಸಿದರು.