Subscribe to Updates

    Get the latest creative news from FooBar about art, design and business.

    What's Hot

    ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ

    February 24, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಯಕ್ಷಗಾನ ಕಲಾರಂಗದಿಂದ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ
    Awards

    ಉಡುಪಿಯ ಯಕ್ಷಗಾನ ಕಲಾರಂಗದಿಂದ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ

    June 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ದಿನಾಂಕ 23-06-2024ರಂದು ಸಂಸ್ಥೆಯ ಐ.ವೈ.ಸಿ. ಸಭಾಭವನದಲ್ಲಿ ‘ತಾಳಮದ್ದಳೆ ಪ್ರಶಸ್ತಿ 2024’ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು.

    ಈ ಸಮಾರಂಭದಲ್ಲಿ ಮೂಡಬಿದ್ರೆಯ ಶ್ರೀ ಜೈನ ಮಠದ ಸ್ವಸ್ತಿ ಶ್ರೀಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮಿಗಳು ಅನುಗ್ರಹ ಸಂದೇಶ ನೀಡಿ “ಯಕ್ಷಗಾನ ನಮ್ಮ ನಾಡಿನ ಪರಿಪೂರ್ಣ ಕಲಾಪ್ರಕಾರ. ತಾಳಮದ್ದಲೆ ಏಕಕಾಲದಲ್ಲಿ ಪುರಾಣದ ಕತೆಯನ್ನು ಜನ ಸಾಮಾನ್ಯರಿಗೆ ತಲಪಿಸುತ್ತಾ, ವ್ಯಾಖ್ಯಾನಿಸುತ್ತಾ, ಮುರಿದು ಕಟ್ಟುತ್ತಾ ಬಂದಿದೆ. ಅನೇಕ ವಿದ್ವಾಂಸರು ಇದನ್ನು ಶತಮಾನಗಳಿಂದ ಮಾಡುತ್ತಾ ಬಂದಿದ್ದಾರೆ. ಪ್ರಸ್ತುತ ಸಂಘರ್ಷದ ಸಂದರ್ಭದಲ್ಲಿ ಇದರ ಕೊಡುಗೆ ಅತ್ಯಂತ ಮಹತ್ವದ್ದು” ಎಂದು ಅಭಿಪ್ರಾಯಪಟ್ಟರು.

    ತಲಾ ರೂ.20,000/- ನಗದು ಮತ್ತು ಪ್ರಶಸ್ತಿ ಪತ್ರಗಳನ್ನೊಳಗೊಂಡಿರುವ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಜಬ್ಬಾರ್ ಸಮೊ ಅವರಿಗೂ, ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಸೇರಾಜೆ ಸೀತಾರಾಮ ಭಟ್ ಅವರಿಗೂ ಪ್ರದಾನ ಮಾಡಲಾಯಿತು. ಶಾರದಾ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಎಂ.ಬಿ. ಪುರಾಣಿಕರು ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಪಂಜ ಭಾಸ್ಕರ ಭಟ್, ಡಾ. ಆದರ್ಶ ಹೆಬ್ಬಾರ್, ಶ್ರೀಮತಿ ರಜನಿ ಹೆಬ್ಬಾರ್ ಅಭ್ಯಾಗತರಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್.ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ನಾರಾಯಣ ಎಂ. ಹೆಗಡೆ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಎಚ್.ಎನ್. ಶೃಂಗೇಶ್ವರ ವಂದಿಸಿ, ಕಾರ್ಯದರ್ಶಿ ಮುರಲೀ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಪ್ರಶಸ್ತಿ ಪ್ರದಾನದ ಅನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಸೀತಾಪಹಾರ’ ತಾಳಮದ್ದಲೆ ಪ್ರಸ್ತುತಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರೌಢ ಶಾಲೆ ವಿಭಾಗದಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ
    Next Article ಬಂಟ್ವಾಳದಲ್ಲಿ ಕಲಾಕೃತಿಗಳನ್ನೊಳಗೊಂಡ ‘ಒರಿಗಾಮಿ ಬಸ್’
    roovari

    Add Comment Cancel Reply


    Related Posts

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    February 24, 2026

    ಹೊಸಬೆಟ್ಟಿನಲ್ಲಿ ಅಹೋರಾತ್ರಿ ತಾಳಮದ್ದಳೆ ‘ಗಿರಿಜಾ ಕಲ್ಯಾಣ – ಇಂದ್ರಜಿತು ಕಾಳಗ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.