Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ, ಪ್ರತಿಭಾ ಪುರಸ್ಕಾರ
    News

    ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ, ಪ್ರತಿಭಾ ಪುರಸ್ಕಾರ

    August 9, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪಣಂಬೂರು : ಮುಂಬಯಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ದ.ಕ ಮತ್ತು ಉಡುಪಿ ಜಿಲ್ಲಾ ಶಾಖೆ ಸುರತ್ಕಲ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ದಿನಾಂಕ 29-07-2023ರಂದು ಸಮಾಜದ ವಿದ್ಯಾರ್ಥಿಗಳಿಗೆ ಇಂದಿನ ವೃತ್ತಿ ಜೀವನದ ಈ ಸ್ಪರ್ಧಾತ್ಮಕ ಹಾಗೂ ತಾಂತ್ರಿಕ ಯುಗದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಜರಗಿಸಲಾಯಿತು.

    ಮಂಡಳಿ ಸದಸ್ಯರಾದ ಬಾಲಕೃಷ್ಣ ಎನ್‌.ಸುವರ್ಣ ಅವರು ಮಾತನಾಡಿ, “ಇಂದಿನ ಬದುಕಿನಲ್ಲಿ ಯುವ ಪೀಳಿಗೆ ಕಠಿನ ಪರಿಶ್ರಮ ಹಾಗೂ ಆತ್ಮವಿಶ್ವಾಸವನ್ನು ಹೊಂದಿ ಮುನ್ನಡೆಯಬೇಕು. ಅಂತೆಯೇ ಹೆತ್ತವರನ್ನು ಮತ್ತು ಗುರುಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಯತೀಶ್ ಬೈಕಂಪಾಡಿಯವರು ಈ ಶಿಬಿರವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳಿಯ ದ.ಕ ಮತ್ತು ಉಡುಪಿ ಜಿಲ್ಲಾ ಶಾಖಾ ಉಪಾಧ್ಯಕ್ಷರಾದ ಸದಾಶಿವ ಕೋಟ್ಯಾನ್ ಹೆಜಮಾಡಿಯವರು ವಹಿಸಿದ್ದರು. ಎಸ್.ಎಸ್.ಎಲ್.ಸಿ.ಹಾಗೂ ಪಿ.ಯು.ಸಿ.ಪರೀಕ್ಷೆಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ‘ಮೊಗವೀರ’ ಕನ್ನಡ ಮಾಸಿಕದ ಸಂಪಾದಕರಾದ ಅಶೋಕ್ ಸುವರ್ಣ, ಶಾಖಾ ಸದಸ್ಯರಾದ ಶೋಭಂದ್ರ ಸಾಲ್ಯಾನ್ ಸಸಿಹಿತ್ಲು ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಖಾ ಕೋಶಾಧಿಕಾರಿ ಭರತ್ ಕುಮಾರ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ಶರ್ಲಿ ಗಿರೀಶ್‌ ಕಾರ್ಯಕ್ರಮ ನಿರ್ವಹಣೆಗೆ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಕೇಶವ ಭಟ್ಟ ಮತ್ತು ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ
    Next Article ಮಂಗಳೂರು ವಿ.ವಿ.ಯಲ್ಲಿ ‘ಯಕ್ಷಗಾನ ಹಿಮ್ಮೇಳ ತರಗತಿ’ಯ ಉದ್ಘಾಟನೆ
    roovari

    Add Comment Cancel Reply


    Related Posts

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಎನ್.ಐ.ಟಿ.ಕೆ.ಯಲ್ಲಿ ‘ವಿರಾಸತ್’ ಸಂಗೀತ, ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ | ಫೆಬ್ರುವರಿ 4ರಿಂದ 8  

    February 3, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಕಲಾರಾಧಕರನ್ನು ಮಂತ್ರಮುಗ್ಧರನ್ನಾಗಿಸಿದ ‘ನೃತ್ಯೋತ್ಕ್ರಮಣ’ ಭರತನಾಟ್ಯ ಕಾರ್ಯಕ್ರಮ

    January 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.