ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 17 ಮೇ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಂಭ್ರಮದಲ್ಲಿ ಹಿರಿಯ ಪತ್ರಕರ್ತರಾದ ಜಿ.ಎನ್. ಮೋಹನ್ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿಯವರು ಅಧ್ಯಕ್ಷತೆ ವಹಿಸಲಿರುವರು. ಸಂತೋಷ ನಾಯಕ್ ಪಟ್ಲ ಇವರ ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಉಡುಪಿಯ ಭೂಮಿಗೀತ ಸಾಂಸ್ಕೃತಿಕ ವೇದಿಕೆಯ ತಂಡದವರಿಂದ ‘ದಿ ಫೈಯರ್’ ನಾಟಕ ಪ್ರದರ್ಶನಗೊಳ್ಳಲಿದೆ.