Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಸಾಹಿತ್ಯ ಅಕಾಡೆಮಿಯಿಂದ ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ
    Competition

    ತುಳು ಸಾಹಿತ್ಯ ಅಕಾಡೆಮಿಯಿಂದ ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ

    March 27, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉರ್ವಸ್ಟೋರ್ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳು ಪರಿಷತ್ ಇದರ ಆಶ್ರಯದಲ್ಲಿ ದಿನಾಂಕ 20 ಮಾರ್ಚ್ 2026ರ ಶುಕ್ರವಾರ ಮಂಗಳೂರಿನ ಉರ್ವಸ್ಟೋರ್‌ನ ತುಳು ಭವನದಲ್ಲಿ ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ ನಡೆಯಿತು.

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದ‌ರ್ ಇವರು ಮಾತನಾಡಿ “ಸಾವಿರಾರು ವರ್ಷಗಳಿಂದ ಲಿಪಿ, ಅಕ್ಷರವಿಲ್ಲದ ಸಂದರ್ಭದಲ್ಲಿ ತುಳು ಭಾಷೆಯನ್ನು ಉಳಿಸಿರುವುದು ದೈವಗಳು. ತುಳು ಭಾಷೆ ಕರಾವಳಿ ಪ್ರದೇಶದ ಸಂಸ್ಕೃತಿ, ಆಚಾರಗಳ ಕೈಗನ್ನಡಿ. ಭಾಷೆಯನ್ನು ಮರೆತರೆ ನಮ್ಮ ಸಂಸ್ಕೃತಿ ವಿನಾಶದ ಅಂಚಿಗೆ ತಲುಪುತ್ತದೆ” ಎಂದು ಹೇಳಿದರು.

    ನಿಟ್ಟೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಪ್ರೀತಂ ನಾಯಕ್ ಉದ್ಘಾಟಿಸಿ ಮಾತನಾಡಿ, “ಇತರ ಭಾಷೆಗಳಿಗೆ ಗೌರವ ನೀಡುತ್ತಾ ನಮ್ಮ ತುಳು ಭಾಷೆ ಸಂಸ್ಕೃತಿಯನ್ನು ಪ್ರೀತಿಸಬೇಕು” ಎಂದರು. ಬ್ರಹ್ಮಾವರ ಎಸ್.ಎಂ.ಸಿ. ಕಾಲೇಜಿನ ವಿದ್ಯಾರ್ಥಿನಿ ಅಭಿಜ್ಞಾ ಹೆಗ್ಡೆ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಆಧುನಿಕತೆಯ ಭರಾಟೆಯಲ್ಲಿ ತುಳು ಭಾಷೆ ಮರೆಗೆ ಸರಿಯುವ ಭೀತಿ ಎದುರಾಗಿದೆ. ವಿದ್ಯಾರ್ಥಿಗಳ ಮೂಲಕ ತುಳು ತೇರು ಎಳೆಯುವ ಕೆಲಸವನ್ನು ಅಕಾಡೆಮಿ ಮತ್ತು ಪರಿಷತ್ ಮಾಡುತ್ತಿದೆ. ಟಿ.ವಿ. ಮೊಬೈಲ್‌ನ ದಾಸರಾಗಿರುವ ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು” ಎಂದರು.

    ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ತುಕಾರಾಮ ಪೂಜಾರಿ ಮಾತನಾಡಿ, “ನಾಟಿ, ವಿಷ ವೈದ್ಯ, ಮಂತ್ರ ವೈದ್ಯ ಸೇರಿದಂತೆ ಅಪಾರ ಜ್ಞಾನ ಸಂಪತ್ತು ತುಳುನಾಡು ಹೊಂದಿತ್ತು. ಆದರೆ, ಇಂದು ಅದು ಸಂಪೂರ್ಣ ನಾಶವಾಗಿದೆ. ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ತುಳು ಉಳಿಸಲು ಮುಂದಾಗಬೇಕು” ಎಂದರು.

    ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, “ಭಾಷೆಯನ್ನು ವಿದ್ಯಾರ್ಥಿಗಳು ಬಳಸಿದರೆ ಬೆಳೆಯಲು ಸಾಧ್ಯ. ತುಳು ಶ್ರೀಮಂತ ಭಾಷೆಯಾಗಿದ್ದು, 8ನೇ ಪರಿಚ್ಛೇದಕ್ಕೆ ಸೇರಬೇಕಾದ ನೈಜ ಅರ್ಹತೆ ಇರುವ ಭಾಷೆ 2011ರಲ್ಲಿ 8ನೇ ಪರಿಚ್ಛೇದಕ್ಕೆ ಸೇರಲು 92 ಭಾಷೆಗಳಿದ್ದವು. ಈಗ ಆ ಸಂಖ್ಯೆ 145ಕ್ಕೆ ಏರಿಕೆಯಾಗಿದೆ. ಅನೇಕ ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ರಾಜ್ಯ ಭಾಷೆಗಳಿವೆ. ಮುಂದಿನ ದಿನಗಳಲ್ಲಿ ಸರಕಾರ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ತಯಾರಿಯಲ್ಲಿದೆ” ಎಂದರು.

    ಶ್ರೀ ಜಗದ್ಗುರು ದುರುದುಂಡೇಶ್ವರ ಸಿದ್ಧಸಂಸ್ಥಾನ ಮಠ ನಿಡೊಸೋಸಿಯ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಶುಭ ಹಾರೈಸಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಕಾಪಿಕಾಡ್, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಪ್ರಸ್ತಾವಿಸಿದರು. ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯ ಸಂಚಾಲಕ ಉದ್ಯಾವರ ನಾಗೇಶ್, ಕಲಾಸಿರಿಯ ಸಂಚಾಲಕಿ ಚಂದ್ರಕಲಾ ರಾವ್, ತುಳು ಪರಿಷತ್ತಿನ ಗೌರವಾಧ್ಯಕ್ಷ ಡಾ. ಪ್ರಭಾಕರ್‌ ನೀರುಮಾರ್ಗ, ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮಣ್ಣ, ಕೋಶಾಧಿಕಾರಿ ಸುಮತಿ ಹೆಗ್ಡೆ ಡಾ. ಮೀನಾಕ್ಷಿ ರಾಮಚಂದ್ರ, ಅಮಿತ ಅಶ್ವಿನ್ ಮತ್ತಿತರರು ಇದ್ದರು. ವಿದ್ಯಾರ್ಥಿನಿ ಸನ್ನಿಧಿ ಸ್ವಾಗತಿಸಿ, ಶ್ರಾವ್ಯ ವಂದಿಸಿದರು. ಮೇಘಾಶ್ರೀ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಗೋಷ್ಠಿಗಳು, ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    baikady competition Cultural dance folk Literature Music roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ಪ್ರೀತಿ ಪರಿಚಯ ಸರಣಿ – ಪುಸ್ತಕ ವಿಮರ್ಶಾ ಕಾರ್ಯಕ್ರಮ
    Next Article ಶಿವಮೊಗ್ಗದಲ್ಲಿ 248ನೇ ‘ಸಾಹಿತ್ಯ ಹುಣ್ಣಿಮೆ ಸಂಭ್ರಮ’ ಕಾರ್ಯಕ್ರಮ | ಮಾರ್ಚ್ 28
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.