Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025

    ಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ನಿಧನ
    Yakshagana

    ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ನಿಧನ

    June 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಯಕ್ಷಗಾನ ಭಾಗವತರಾಗಿ ಹಲವು ಯಕ್ಷಗಾನ ಸಂಘ ಮತ್ತು ಉಡುಪಿ ಯಕ್ಷಶಿಕ್ಷಣ ಟ್ರಸ್ಟಿನಲ್ಲಿ ಗುರುಗಳಾಗಿ ಸಾವಿರಾರು ಕಲಾವಿದರನ್ನು ಸಿದ್ಧಪಡಿಸಿದ ಯಕ್ಷವಾರಿಧಿ, 77ವರ್ಷದ ತೋನ್ಸೆ ಜಯಂತ ಕುಮಾರ್ 26-06-2023ರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
    ಹಂಗಾರಕಟ್ಟೆ ಚೇತನಾ ಪ್ರೌಢ ಶಾಲೆಯ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದ ತೋನ್ಸೆಯವರಿಗೆ ಯಕ್ಷಗಾನ ಪ್ರವೃತ್ತಿಯಾಗಿತ್ತು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು. ಆರಂಭದಲ್ಲಿ ಯಕ್ಷಗಾನ ವೇಷಧಾರಿಯಾಗಿ ಆಮೇಲೆ ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಬಡಗು ತಿಟ್ಟಿನಲ್ಲಿ ಯಕ್ಷಗಾನ ಸವ್ಯಸಾಚಿ ಎಂದೇ ಖ್ಯಾತಿಗಳಿಸಿದ್ದ ಅವರಿಗೆ ಅದೇ ಹೆಸರಿನ ಅಭಿನಂದನಾ ಗ್ರಂಥ ಸಮರ್ಪಣೆಯಾಗಿದೆ.
    ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟ್ರಸ್ಟಿನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾದ ಇವರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಮತ್ತು ಯಕ್ಷಾಂಗಣ ಮಂಗಳೂರು ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿ-ಗೌರವಗಳು ಲಭಿಸಿವೆ. ಇತ್ತೀಚೆಗೆ ಅನಾರೋಗ್ಯದಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಜಯಂತರು ಮತ್ತೆ ಚೇತರಿಸಿಕೊಳ್ಳಲಿಲ್ಲ. ಇವರು ಪತ್ನಿ, ಮೂವರು ಪುತ್ರರು, ಸಹೋದರ ಬಹುಮುಖೀ ಕಲಾವಿದ ತೋನ್ಸೆ ಪುಷ್ಕಳ್ ಕುಮಾರ್, ಬಂಧು ಬಳಗ ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸೇರಿದಂತೆ ಹಲವಾರು ಗಣ್ಯರು ಮತ್ತು ಯಕ್ಷಗಾನ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    ನಾಳೆ(ಜೂ.27) ಬೆಳಿಗ್ಗೆ 9.00 ಗಂಟೆಗೆ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿದೆ. 10.30ಕ್ಕೆ ಬೀಡಿನ ಗುಡ್ಡೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ

    Share. Facebook Twitter Pinterest LinkedIn Tumblr WhatsApp Email
    Previous Articleಹರಿಕಥಾ ಪರಿಷತ್ತಿನ ಮಂಗಳೂರು ವಲಯ ಸದಸ್ಯರ ಸಮಾವೇಶ – ಸಂವಾದ ಗೋಷ್ಠಿ | 29 ಜೂನ್ ರಂದು
    Next Article ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಉಪನ್ಯಾಸ | ಜೂನ್ 28ರಂದು
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.