ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಡಾ. ಅಮೃತ ಸೋಮೇಶ್ವರ ಇವರ ಮೂರು ನಾಟಕಗಳ ಇಂಗ್ಲೀಷ್ ಅನುವಾದ ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 14 ಜನವರಿ 2026ರಂದು ಮಧ್ಯಾಹ್ನ ಗಂಟೆ 3-00ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಾನ್ನಿಧ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಮೃತ ಸೋಮೇಶ್ವರ ಇವರ ಗೊಂದೋಳು, ಸತ್ಯನಾಪುರ ಸಿರಿ, ರಾಯ ರಾವುತೆ ಈ ಮೂರು ನಾಟಕ ಕೃತಿಯನ್ನು ಅಲೋಶಿಯಸ್ ವಿವಿಯ ಆಂಗ್ಲ ಭಾಷಾ ಉಪನ್ಯಾಸಕಿ ಡಾ. ಸಿಲ್ವಿಯಾ ರೇಗೊ ಇವರು ಇಂಗ್ಲೀಷ್‌ಗೆ ಅನುವಾದಿಸಿರುತ್ತಾರೆ. ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಇವರು ಕೃತಿ ಬಿಡುಗಡೆ ಮಾಡಲಿದ್ದು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಾಸ್ತಾವಿಕ ಮಾತುಗಳನ್ನಾಡುವರು. ವಿಶ್ರಾಂತ ಆಕಾಶವಾಣಿ ಕಾರ್ಯಕ್ರಮ ನಿರೂಪಕ ಮುದ್ದು ಮೂಡುಬೆಳ್ಳೆ, ನಿವೃತ್ತ ಸಹ ಪ್ರಾಧ್ಯಾಪಕ ಡಾ. ಚೇತನ್ ಸೋಮೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

