ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಕನ್ನಡ ವಿಭಾಗ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಬೆಳ್ತಂಗಡಿ ಹೋಬಳಿ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಸಾಹಿತಿ ಪದ್ಮಭೂಷಣ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ನುಡಿನಮನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ದಿನಾಂಕ 16 ಅಕ್ಟೋಬರ್ 2025ರಂದು ಮಧ್ಯಾಹ್ನ 2-15 ಗಂಟೆಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮ್ಯಗ್ದರ್ಶನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರ ಅಧ್ಯಕ್ಷತೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಶಾಖಾ ಪ್ರಬಂಧಕರಾದ ಶಿವಪ್ರಸಾದ್ ಸುರ್ಯ ಇವರು ನುಡಿನಮನಗಳನ್ನಾಡಲಿದ್ದು, ಡೀನ್ ಡಾ. ಭಾಸ್ಕರ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಂದ ಧರ್ಮಶ್ರೀ, ಜಲಪಾತ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ನಿರಾಕರಣ, ಆವರಣ, ವಂಶವೃಕ್ಷ, ಗೃಹಭಂಗ ಕಾದಂಬರಿಗಳ ಕುರಿತು ವಿಚಾರ ಮಂಡನೆ ನಡೆಯಲಿದೆ.