ಮಂಗಳೂರು : ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 15ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 14 ಜೂನ್ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭಾ ಕಾರ್ಯಕ್ರಮವನ್ನು ಕ.ಸಾ.ಪ. ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರು ಉದ್ಘಾಟಿಸಲಿದ್ದು, ಹಿರಿಯ ಲೆಕ್ಕಪರಿಶೋಧಕ ಸಿಎ ಎಸ್.ಎಸ್. ನಾಯಕ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಮೊಯಿದೀನ್ ಬಾವಾ, ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಮತ್ತು ಉದ್ಯಮಿ ದಿನೇಶ್ ಪೈ ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಯಕ್ಷಗಾನದ ತೆಂಕುತಿಟ್ಟಿನ ಹಿರಿಯ ಕಲಾವಿದ ಶಿವರಾಮ ಜೋಗಿ ಬಿ.ಸಿ. ರೋಡ್ ಇವರನ್ನು ಈ ವೇಳೆ ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರದ ಬಳಿಕ ಶ್ರೀ ಯಕ್ಷಗಾನ ಕಲಾಮೇಳ ಶಿರಸಿ ಇವರಿಂದ ಬಡಗುತಿಟ್ಟಿನ ಯಕ್ಷಗಾನ ಬಯಲಾಟ ‘ಅಂಗದ ಸಂಧಾನ’ ಪ್ರದರ್ಶನಗೊಳ್ಳಲಿದೆ.


