ಉಡುಪಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಉಡುಪಿ ಘಟಕ ವತಿಯಿಂದ ಗೌರವಾರ್ಪಣಾ ಕಾರ್ಯಕ್ರಮವು ದಿನಾಂಕ 05 ಜುಲೈ 2025ರಂದು ಉಡುಪಿಯ ಪುರಭವನದಲ್ಲಿ ನಡೆಯಿತು.
ಪ್ರೊ. ಪವನ್ ಕಿರಣ್ ಕೆರೆ ಇವರು ಫೌಂಡೇಷನ್ನಿನ ಕಾರ್ಯವೈಖರಿಯ ಬಗ್ಗೆ ಆಶಯ ಭಾಷಣದಲ್ಲಿ ನುಡಿದರು. ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾದ ಟಿ. ಶ್ಯಾಮ್ ಭಟ್ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮಾಹೆ ಮಣಿಪಾಲ ಇದರ ಡಾ. ಹೆಚ್.ಯಸ್. ಬಲ್ಲಾಳ್, ಪ್ರೊ ಎಂ.ಎಲ್. ಸಾಮಗ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರು ಪಟ್ಲ ಸತೀಶ್ ಶೆಟ್ಡಿ, ಉಡುಪಿ ಘಟಕದ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಸಂಚಾಲಕರಾದ ಸುಧಾಕರ ಆಚಾರ್ಯ, ಮಹಿಳಾ ಘಟಕದ ಸದಸ್ಯೆಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ಘಟಕಕ್ಕೆ ಗೌರವನಿಧಿಯನ್ನು ಸಮರ್ಪಿಸಲಾಯಿತು. ಉಡುಪಿ ಘಟಕದ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಇವರು ಸ್ವಾಗತಿಸಿ, ಶಿಲ್ಪಾ ಜೋಷಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ತೆಂಕು ಬಡಗುತಿಟ್ಟಿನ ಕಲಾವಿದರಿಂದ ‘ದಕ್ಷಯಜ್ಞ’ ಯಕ್ಷಗಾನ ಪ್ರದರ್ಶನ ನಡೆಯಿತು.