ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಲಾವಿದ ದಿ. ವಿ.ಟಿ. ಶ್ರೀನಿವಾಸ್ ನೆನಪು, ಗಾನ ಮತ್ತು ನುಡಿ ನಮನ ಕಾರ್ಯಕ್ರಮವು ದಿನಾಂಕ 11 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 11-00 ಗಂಟೆಗೆ ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಉದ್ಘಾಟನೆಯನ್ನು ಪೊನ್ನಂಪೇಟೆಯ ನೀನಾದ ಸಂಗೀತ ನೃತ್ಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಚೇಂದಿರ ನಿರ್ಮಲ ಬೋಪಣ್ಣ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಾನಲ್ ಕೂರ್ಗ್ ಇವರ ಸಂಪಾದಕರಾದ ಶ್ರೀಧರ ನೆಲ್ಲಿತಾಯ, ಆಕಾಶವಾಣಿ ಕಲಾವಿದರಾದ ಬಿ.ಎ. ಗಣೇಶ್, ವಿರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ವ್ಯವಸ್ಥಾಪಕರಾದ ವಿದ್ವಾನ್ ದಿಲಿ ಕುಮಾರ್, ಅದ್ಯಾಪಕರು ಮತ್ತು ಕಲಾವಿದರಾದ ಕೆ. ಚಂದ್ರಶೇಖರ್, ತಬಲ ಕಲಾವಿದರಾದ ಮುರ್ನಾಡಿನ ಚಂದ್ರು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ದಿ. ವಿ.ಟಿ. ಶ್ರೀನಿವಾಸ್ ಇವರ ಕುಟುಂಬಸ್ಥರು ಭಾಗವಹಿಸಲಿದ್ದಾರೆ. ದಿವಂಗತ ವಿ.ಟಿ. ಶ್ರೀನಿವಾಸ್ ಸ್ನೇಹಿತರ ಬಳಗದಿಂದ ಗಾನ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.