ಮಂಗಳೂರು: ತುಲುವೆರೆ ಟ್ರಸ್ಟ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ‘ತುಡರ ಪರ್ಬ’ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 19 ಅಕ್ಟೋಬರ್ 2025ರಂದು ಬೆಳಗ್ಗೆ ಘಂಟೆ 9.30ಕ್ಕೆ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸುರತ್ಕಲ್ ಗೋವಿಂದದಾಸ ಕಾಲೇಜು ಉಪನ್ಯಾಸಕಿ ಅಕ್ಷತಾ ವಿ. ‘ತುಡರ ಪರ್ಬ’ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ನಡೆಯಲಿರುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕೆನರಾ ಕಾಲೇಜು ಇಲ್ಲಿನ ಉಪನ್ಯಾಸಕರಾದ ರಘು ಇಡ್ಡಿದು ವಹಿಸಲಿದ್ದು, ಇದೇ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ತುಲುವೆರೆ ಕಲ ಟ್ರಸ್ಟ್ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ತಿಳಿಸಿದ್ದಾರೆ.