Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ತುಳು ಕಾದಂಬರಿಗಳ ಹಸ್ತಪ್ರತಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 15
    Awards

    ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ತುಳು ಕಾದಂಬರಿಗಳ ಹಸ್ತಪ್ರತಿ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 15

    December 2, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ತುಳುಕೂಟದ ಆಶ್ರಯದಲ್ಲಿ ನಡೆಯುವ ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಆಯ್ಕೆಗಾಗಿ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ತುಳು ಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕು ಎಂಬ ಆಶ್ರಯದಿಂದ ತುಳು ಚಳವಳಿಯ ಪ್ರವರ್ತಕ ದಿ. ಎಸ್.ಯು. ಪಣಿಯಾಡಿ ಇವರ ನೆನಪಿನಲ್ಲಿ ನೀಡುವ ಈ ಪ್ರಶಸ್ತಿಗೆ ಈ ಕೆಳಗಿನ ನಿಬಂಧನೆಗೊಳಪಟ್ಟ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು.

    ಹಸ್ತಪ್ರತಿಗಳು ತುಳು ಕಾದಂಬರಿಗಳಾಗಿರಬೇಕು. ಅದು ಈವರೆಗೆ ಯಾವುದೇ ಬಹುಮಾನಕ್ಕೆ ಆಯ್ಕೆಯಾಗಿರಬಾರದು. ಇದುವರೆಗೆ ಎಲ್ಲೂ ಮುದ್ರಿತವಾಗಿರಬಾರದು. ಆಯ್ಕೆಯಾದರೆ ಮುದ್ರಿಸುವಾಗ ಕ್ರೌನ್ 1/8 ಆಕಾರದಲ್ಲಿ 120 ಪುಟಗಳನ್ನು ಮೀರದಷ್ಟು ದೀರ್ಘವಾಗಿರಬೇಕು. ಹಸ್ತಪ್ರತಿಗಳು ಸುಂದರವಾದ ಕೈಬರಹ, ಬೆರಳಚ್ಚು ಅಥವಾ ಕಂಪ್ಯೂಟರ್ ಮುದ್ರಿತ (ಡಿಟಿಪಿ) ರೂಪದಲ್ಲಿರಬಹುದು. ಕಾದಂಬರಿಯು ತುಳುನಾಡಿನ ಭೌಗೋಳಿಕ ಚಿತ್ರಣ, ತುಳು ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳಿಂದ ಕೂಡಿದ್ದು, ಪೌರಾಣಿಕ, ಐತಿಹಾಸಿಕ, ಜಾನಪದ, ಸಾಮಾಜಿಕ ವಸ್ತುವನ್ನು ಆಧರಿಸಿರಬಹುದು.

    ಪ್ರಶಸ್ತಿ ರೂ.8,000/- ಮೊತ್ತ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದ್ದು, ಹಸ್ತಪ್ರತಿಯನ್ನು ದಿನಾಂಕ 15 ಡಿಸೆಂಬರ್ 2024ರೊಳಗೆ  ಪಣಿಯಾಡಿ ತುಳು ಕಾದಂಬರಿ ಸ್ಪರ್ಧೆಯ ಸಂಚಾಲಕಿ – ಶಿಲ್ಪಾ ಜೋಶಿ ಶೆಲ್ಟರ್, ಹೆಚ್.ಐ.ಜಿ 19, ಪ್ರಸನ್ನ ಗಣಪತಿ ದೇವಸ್ಥಾನದ ಎದುರು, ಮಣ್ಣುಪಳ್ಳ. ಮಣಿಪಾಲ, ಉಡುಪಿ – 576 104 (ಮೊಬೈಲ್ – 7892194150) ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು (9844532629) ಇವರನ್ನು ಸಂಪರ್ಕಿಸಬಹುದು ಎಂದು ಉಡುಪಿ ತುಳುಕೂಟದ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿಯವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ‘ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ’
    Next Article ಧಾರವಾಡದಲ್ಲಿ ಪ್ರಥಮ ರಾಜ್ಯಮಟ್ಟದ ಕವಿಪೀಠ ಮಹಾ ಸಮ್ಮೇಳನ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications