ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಮತ್ತು ನಾಗರಿಕ ಸಲಹಾ ಸಮಿತಿ (ರಿ), ಸುರತ್ಕಲ್‌ಗಳ ವತಿಯಿಂದ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಉದಯರಾಗ – 52 ಶಾಸ್ತ್ರೀಯ ಸಂಗೀತ ಸರಣಿ ಕಾರ್ಯಕ್ರಮವು ದಿನಾಂಕ 07-04-2024ರಂದು ಸುರತ್ಕಲ್ ಫ್ಲೈಓವರ್ ಕೆಳಗಡೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸುರತ್ಕಲ್ ರೋಟರಿ ಕ್ಲಬ್ ಇದರ ಅಧ್ಯಕ್ಷರಾದ ಯೋಗೀಶ್ ಕುಳಾಯಿ ಮಾತನಾಡಿ “ಸಾಮಾಜಿಕ ಸೇವಾ ಸಂಸ್ಥೆಗಳು ಶಾಸ್ತ್ರೀಯ ಸಂಗೀತ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಭಾರತೀಯ ಸಂಸ್ಕೃತಿಯ ಅಭಿವೃದ್ಧಿಗೆ ಶ್ರಮಿಸಬೇಕು.” ಎಂದರು.
ಸುರತ್ಕಲ್ ನಾಗರಿಕ ಸಲಹಾಸಮಿತಿಯ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್‌ರಾವ್, ಸುರತ್ಕಲ್ ರೋಟರಿ ಕ್ಲಬ್ ಇದರ ಕಾರ್ಯದರ್ಶಿ ರಮೇಶ್ ರಾವ್ ಎಂ. ಉಪಸ್ಥಿತರಿದ್ದರು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾಸ್ಟರ್ ಆಕಾಶ್‌ಕೃಷ್ಣ ವೇಣೂರು ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಇವರಿಗೆ ವಯೋಲಿನ್‌ನಲ್ಲಿ ಸುನಾದ ಪಿ.ಎಸ್. ಮಾವೆ, ಮೃದಂಗದಲ್ಲಿ ಯುವಕಲಾಮಣಿ ನೀಕ್ಷಿತ್ ಪುತ್ತೂರು, ಬೆಂಗಳೂರು ಹಾಗೂ ಖಂಜೀರದಲ್ಲಿ ಕಾರ್ತಿಕ್ ಭಟ್ ಇನ್ನಂಜೆ ಸಹಕರಿಸಿದರು.