ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಮತ್ತು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಭಾಷಾ ವಿಭಾಗ, ಉಡುಪಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಮತ್ತು ಯಕ್ಷ ಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮವು ಪೂರ್ಣಪ್ರಜ್ಞ ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ಮೇ 5ರಂದು ಸಂಜೆ 5:30 ರಿಂದ 6:30ವರೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ. ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಕ.ಸಾ.ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ಶ್ರೀ ರವಿರಾಜ್ ಎಚ್.ಪಿ. ವಹಿಸಲಿದ್ದು. ವಿಶೇಷ ಉಪನ್ಯಾಸವನ್ನು ಸಾಹಿತಿ ಶ್ರೀ ನಾರಾಯಣ ಮಡಿ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ಶ್ರೀ ಭುವನ ಪ್ರಸಾದ್ ಹೆಗ್ಡೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಸ್ಥಾಪಕರಾದ ಉಡುಪಿ ಶ್ರೀ ವಿಶ್ವನಾಥ ಶೆಣೈ, ಕಲಾವಿದ, ಮೂಳೆರೋಗ ತಜ್ಞರಾದ ಡಾ. ಸುರೇಶ ಶೆಣೈ, ಉಡುಪಿ ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಶ್ರೀ ಎಸ್.ವಿ. ಭಟ್ ಉಪಸ್ಥಿತರಿರುತ್ತಾರೆ.
ಇದೇ ಸಂದರ್ಭದಲ್ಲಿ ಯಕ್ಷ ಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಹಿರಿಯ ಯಕ್ಷಗಾನ ಕಲಾವಿದ ಶ್ರೀ ಕೂಡ್ಲಿ ದೇವದಾಸ್ ರಾವ್ ಅವರಿಗೆ ನೀಡಲಾಗುವುದು.