10 ಮಾರ್ಚ್ 2023, ಉಳ್ಳಾಲ: ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಜಿಸಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಇದೇ 17ರಂದು ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ತಾಲೂಕಿನ ಮೊದಲ ಸಾಹಿತ್ಯ ಸಮ್ಮೇಳನ ಇದಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಮತ್ತು ತಜ್ಞರ ಸಮಿತಿ ಶ್ರೀಮತಿ ಶ್ಯಾಮಲಾ ಮಾಧವ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ ಎಂದು ಕಸಾಪ ಉಳ್ಳಾಲ ಘಟಕದ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ.
ಉಳ್ಳಾಲ ಸೋಮೇಶ್ವರದ ಯು. ನಾರಾಯಣ ಮತ್ತು ವಸಂತಿ ದಂಪತಿಯ ಪುತ್ರಿ ಶ್ಯಾಮಲಾ ಮಾಧವ ಅವರು ಮುಂಬೈಯಲ್ಲಿ ವಾಸವಾಗಿದ್ದು, ಹಿಂದಿ ಕಾದಂಬರಿ ‘ಅಲಂಪನಾ’, ಇಂಗ್ಲೀಷ್ ವಿಶ್ವ ಸಾಹಿತ್ಯ ಕೃತಿಗಳಾದ ‘ಗಾನ್ ವಿದ್ ದ ವಿಂಡ್’, ಫ್ರಾಂಕ್ಲಿನ್ ಸ್ಟೈನ್’, ‘ಜೇನ್ ಏರ್’, ‘ವುದರಿಂಗ್ ಹೈಟ್ಸ್’, ರಾಮಯ್ಯ ರೈ ಅವರ ‘ಪೊಲೀಸ್ ಡೈರಿ’, ಎಂ.ಆರ್. ಪೈ ಅವರ ‘ಏನ್ ಅನ್ ಕಾಮನ್ ಕಾಮನ್ ಮ್ಯಾನ್’ ಕೃತಿಗಳನ್ನು ಕನ್ನಡಕ್ಕೆ, ‘ಯಾತ್ರಿ’ ಎಂಬ ಕೃತಿಯನ್ನು ಇಂಗ್ಲೀಷಿಗೆ ಅನುವಾದಿಸಿದ್ದಾರೆ ಎಂದು ಧನಂಜಯ ಕುಂಬ್ಳೆ ತಿಳಿಸಿದ್ದಾರೆ.
ವಿಲ್ ಡ್ಯುರಾಂಟ್ ಅವರ ‘ದ ಸ್ಟೋರಿ ಆಫ್ ಸಿವಿಲೈಸೇಷನ್’ ಗ್ರಂಥವನ್ನು ಅಂಬೇಡ್ಕರ್ ಬರಹ ಮತ್ತು ಭಾಷಣಗಳ ಸಂಪುಟವನ್ನು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ್ದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅದನ್ನು ಪ್ರಕಟಿಸಿದೆ. ‘ಆ ಲೋಕ’ ಕಥಾಸಂಕಲನ, ‘ಬದುಕು ಚಿತ್ರ ಚಿತ್ತಾರ’ ಲೇಖನ ಸಂಪುಟ, ವಾಸ್ತವವಾದದ ಸಾಹಿತಿ ರಾಮಚಂದ್ರ ಉಚ್ಚಿಲ, ಅರುಂಧತಿ ರಾಯ್ ಅವರ ‘ದ ಗಾಡ್ ಆಫ್ ಸ್ಮಾಲ್ ಥಿಂಗ್ಸ್’ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ನಾಳೆ ಇನ್ನೂ ಕಾದಿದೆ’ ಎಂಬ ಆತ್ಮ ಕಥನ ಪ್ರಕಟಗೊಂಡಿದೆ ಎಂದು ಶ್ಯಾಮಲಾ ಮಾಧವ ತಿಳಿಸಿದ್ದಾರೆ.
ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ. ಸಾವಿತ್ರಮ್ಮ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಗಳಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಮಹಾರಾಷ್ಟ್ರ ಘಟಕದ ಗೌರವ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ. ಮುಂಬೈ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಗೌರವ ಪ್ರಶಸ್ತಿ ಅವರಿಗೆ ಸಂದಿವೆ ಎಂದು ಹೇಳಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿ ನಡೆದ ಸಭೆಯಲ್ಲಿ ಕಸಾಪ ತಾಲೂಕು ಘಟಕದ ಕಾರ್ಯದರ್ಶಿಗಳಾದ ರವೀಂದ್ರ ರೈ ಕಳ್ಳಿಮಾರು, ಎಡ್ವರ್ಡ್ ಲೋಬೊ, ಸ್ವಾಗತ ಸಮಿತಿಯ ಪ್ರಸಾದ್ ರೈ ಕಲ್ಲಿಮಾರು, ಕೋಶಾಧಿಕಾರಿ ಲಯನ್ ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಉಳ್ಳಾಲ ಹೋಬಳಿ ಕಸಾಪ ಅಧ್ಯಕ್ಷೆ ವಿಜಯಲಕ್ಷ್ಮಿ ರೈ ಕಳ್ಳಿಮಾರು ಇದ್ದರು.
Subscribe to Updates
Get the latest creative news from FooBar about art, design and business.
Previous Articleಶಿಕ್ಷಕಿ ಬಿಂದು ಅವರಿಗೆ ಮಹಿಳಾ ಚೈತನ್ಯ ರತ್ನ ಪ್ರಶಸ್ತಿ
Next Article ಭರತನಾಟ್ಯ ಕಲಾವಿದೆ ಆಸ್ತಿಕಾ ಸುನಿಲ್ ಶೆಟ್ಟಿ ಇನ್ನಿಲ್ಲ