ಮಂಗಳೂರು : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಹಾಗೂ ಮಾಂಡ್ ಸೊಭಾಣ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರದ ಶಿಲ್ಪಕಲಾಕೃತಿಗಳ ಲೋಕಾರ್ಪಣೆ ಮತ್ತು ಸಮಾರೋಪ ಸಮಾರಂಭವನ್ನು ದಿನಾಂಕ 26 ಜೂನ್ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಶಕ್ತಿನಗರ ಕಲಾಂಗಣದಲ್ಲಿ ಆಯೋಜಿಸಲಾಗಿದೆ.
ನವದೆಹಲಿ ಕೇಂದ್ರ ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಚಿ.ಸು. ಕೃಷ್ಣಸೆಟ್ಟಿ ಇವರು ಸಮಾರೋಪ ನುಡಿಗಳನ್ನಾಡಲಿದ್ದು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾದ ಎಂ.ಸಿ. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

