ಮಂಗಳೂರು: ಕರ್ನಾಟಕ ಸರ್ಕಾರವು ‘ಸಾಂಸ್ಕೃತಿಕ ನಾಯಕ ಬಸವಣ್ಣ’ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಾದಿ ಶಿವ ಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ ಮಠಾದೀಶರ ಒಕ್ಕೂಟವು ರಾಜ್ಯದ್ಯಂತ ಸೆಪ್ಟೆಂಬರ್ 01 ರಿಂದ ಅಕ್ಟೋಬರ್ 5ರ ವರೆಗೆ ‘ಬಸವ ಸಂಸ್ಕೃತಿ ಅಭಿಯಾನ’ವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ದ.ಕ. ಜಿಲ್ಲಾ ಸಹಮತ ವೇದಿಕೆಯ ಆಶ್ರಯದಲ್ಲಿ ದಿನಾಂಕ 19 ಸೆಪ್ಟೆಂಬರ್ 2025ರಂದು ಮಂಗಳೂರಿನ ಉರ್ವಸ್ಟೋರ್ ಬಳಿಯ ತುಳು ಭವನದಲ್ಲಿ ಅಭಿಯಾನದ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಪದವಿ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಮಟ್ಟದ ಸಮೂಹ ವಚನ ಗಾಯನ ಸ್ಪರ್ಧೆ ಏರ್ಪಡಿಲಾಗಿದೆ. ಸೆಪ್ಟೆಂಬರ್ 16 ರಂದು ಈ ಸ್ಪರ್ಧೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ 9980951074 ಪ್ರವೀಣ ಬಿ. ಎಂ. ಹಾಗೂ 9448911777 ಮೀನಾಕ್ಷಿ ರಾಮಚಂದ್ರ ಇವರನ್ನು ಸಂಪರ್ಕಿಸಬಹುದು.