ಸಿದ್ದಾಪುರ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಯಕ್ಷಗಾನ ಕಲಾರಂಗ (ರಿ.) ಉಡುಪಿ, ಯಕ್ಷ ನುಡಿಸಿರಿ ಬಳಗ (ರಿ.) ಸಿದ್ದಾಪುರ ಮತ್ತು ಯಕ್ಷ ಗುರುಕುಲ ಬೈಂದೂರು ಇವರ ಸಹಭಾಗಿತ್ವದಲ್ಲಿ ವಿಧಾನಸಭಾ ಕ್ಷೇತ್ರದ ನಾಲ್ಕು ಪ್ರೌಢಶಾಲೆಗಳ ‘ಕಿಶೋರ ಯಕ್ಷ ಸಂಭ್ರಮ -2024’ದ ಸಮಾರೋಪ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಸಿದ್ದಾಪುರದ ಸರಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಪ್ರದರ್ಶನ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಜಗದೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಈ ಯಕ್ಷ ಸಂಭ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರ ಮೂಲಕ ಪ್ರಮಾಣ ಪತ್ರ ವಿತರಿಸಲಾಯಿತು. ಮೂವರು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ಅಭ್ಯಾಗತರಾಗಿ ದಾನಿಗಳಾದ ಚಂದ್ರ ಕುಲಾಲ್, ಪ್ರವೀಣ್ ಪಟೇಲ್, ಚಂದ್ರಾನಂದ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಕೃಷ್ಣ ಪೂಜಾರಿ ಭಾಗವಹಿಸಿದರು. ಕಾರ್ಯದರ್ಶಿ ಗೋಪಾಲ ಕಾಂಚನ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಇವರು ಶಾಸಕರಿಗೆ ಮತ್ತು ಪ್ರದರ್ಶನ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು.
ಟ್ರಸ್ಟಿನ ಸದಸ್ಯರಾದ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಬಾಲಕೃಷ್ಣ ಮಂಜ ನಿರ್ವಹಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವಿಶ್ವನಾಥ ತುಂಬಿಕಲ್ಯಾಯ ಧನ್ಯವಾದ ಸಮರ್ಪಿಸಿದರು. ಬಳಿಕ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇದರ ವಿದ್ಯಾರ್ಥಿಗಳಿಂದ ಪ್ರದೀಪ್ ಶೆಟ್ಟಿ ವಿವರ ನಿರ್ದೇಶನದಲ್ಲಿ ‘ಕುಶಲವ’ ಮತ್ತು ಇಂದಿರಾಗಾಂಧಿ ವಸತಿ ಶಾಲೆ ಸಿದ್ದಾಪುರ ಇದರ ವಿದ್ಯಾರ್ಥಿಗಳಿಂದ ನರಸಿಂಹ ತುಂಗಾ ಇವರ ನಿರ್ದೇಶನದಲ್ಲಿ ‘ಮೈಂದ ದ್ವಿವಿದ’ ಮತ್ತು ರುಗ್ಮಾವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಂಡಿತು.