Subscribe to Updates

    Get the latest creative news from FooBar about art, design and business.

    What's Hot

    ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ

    February 24, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ
    Camp

    ಉಡುಪಿಯಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ

    May 15, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ವತಿಯಿಂದ ದಿನಾಂಕ 06-05-2024ರಿಂದ ಪ್ರಾರಂಭಗೊಂಡ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ಬೇಸಿಗೆ ಶಿಬಿರವು ದಿನಾಂಕ 13-05-2024ರಂದು ಸಮಾಪನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಲ.ವಿ.ಜಿ. ಶೆಟ್ಟಿಯವರು “ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇದು ಯಕ್ಷಗಾನದ ಮೂಲಮಠ ಎಂಬುದಾಗಿ ಹೇಳುವುದು ಸಾರ್ಥಕವಾಗಿದೆ. ಯಕ್ಷಗಾನದ ಪಾರಂಪರಿಕ ಶೈಲಿಯ ಸಂರಕ್ಷಣೆಗೆ ಈ ಕೇಂದ್ರ ಅನುಪಮವಾದ ಕೊಡುಗೆ ಸಲ್ಲಿಸಿದೆ. ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರಗಳು ಎಲ್ಲಾ ಕಡೆ ನಡೆಯುತ್ತದೆ. ಆದರೆ ಇದೊಂದು ವಿಶಿಷ್ಟವಾದ ಶಿಬಿರ” ಎಂಬುದಾಗಿ ತಿಳಿಸಿದರು.

    ಅಧ್ಯಕ್ಷತೆ ವಹಿಸಿದ್ದ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆಯವರು ಯಕ್ಷಗಾನ ಕೇಂದ್ರವು ಈ ವಿಶಿಷ್ಟ ಶಿಬಿರ ನಡೆಸುವುದಕ್ಕೆ ಕಾರಣವಾದ ಪ್ರೇರಣೆಯನ್ನು ತಿಳಿಸಿ ಕೇಂದ್ರದ ಚಟುವಟಿಕೆಗಳ ಬಗ್ಗೆ ವಿವರವನ್ನಿತ್ತರು. ವೇದಿಕೆಯಲ್ಲಿ ಸಲಹಾ ಸಮಿತಿ ಸದಸ್ಯರಾದ ಶ್ರೀ ಭುವನ ಪ್ರಸಾದ್ ಹೆಗ್ಡೆ, ಶ್ರೀ ಮಂಜುನಾಥ ಮಯ್ಯ ಹಾಗೂ ಶ್ರೀಮತಿ ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಿಬಿರಾರ್ಥಿಗಳು ತಮ್ಮ ಅನುಭವನ್ನು ಹಂಚಿಕೊಂಡರು. ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಸ್ವಾಗತಿಸಿ, ಶ್ರೀ ರಾಘವೇಂದ್ರ ತುಂಗ ಕಾರ್ಯಕ್ರಮ ನಿರ್ವಹಿಸಿದರು. ಕೇಂದ್ರದ ಗುರುಗಳು, ಯಕ್ಷರಂಗದ ಸದಸ್ಯರು, ವಿದ್ಯಾರ್ಥಿಗಳು, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಶ್ರೀ ವೆಂಕಟೇಶ್, ವಿನೇಶ್ ಹಾಗೂ ನಾಗರಾಜ್ ಕಾರ್ಯಕ್ರಮ ಸಂಘಟಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleತ್ರಿವಳಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ‘ಸುಗಿತ್ ನಲಿಪುಗ -2024’ | ಮೇ 19
    Next Article ಪುಸ್ತಕ ವಿಮರ್ಶೆ | ವನಜಾಕ್ಷಿ ಪಿ. ಚೆಂಬ್ರಕಾನ ಅವರ ‘ಮೌನಭಾವ’ : ಅಂತರಂಗದ ಭಾವತರಂಗ
    roovari

    Add Comment Cancel Reply


    Related Posts

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ಬೊಂಡಾಲದಲ್ಲಿ ‘ಬೊಂಡಾಲ ಪ್ರಶಸ್ತಿ’ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    February 24, 2026

    ಹೊಸಬೆಟ್ಟಿನಲ್ಲಿ ಅಹೋರಾತ್ರಿ ತಾಳಮದ್ದಳೆ ‘ಗಿರಿಜಾ ಕಲ್ಯಾಣ – ಇಂದ್ರಜಿತು ಕಾಳಗ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.