Subscribe to Updates

    Get the latest creative news from FooBar about art, design and business.

    What's Hot

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ
    Awards

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಆಯೋಜಿಸಿರುವ ನಾಲ್ಕು ದಿನಗಳ ಸನಿವಾಸ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ದ ಸಮಾರೋಪ ಸಮಾರಂಭವು ದಿನಾಂಕ 04 ಜುಲೈ 2025ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ನಡೆಯಿತು.

    ಸಭೆಯ ಅಧ್ಯಕ್ಷತೆಯನ್ನು ಲಕ್ಷ್ಮೀಶ ತೋಳ್ಪಾಡಿ ವಹಿಸಿದ್ದು, ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಅಭಿನಂದನಾ ಭಾಷಣ ಮಾಡಿದರು. ಶತಾವಧಾನಿ ಡಾ. ಆರ್. ಗಣೇಶರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ವಿದ್ವಾಂಸರಿಗೆ ನೀಡಲಾಗುವ ರೂ.60,000/- ನಗದನ್ನೊಳಗೊಂಡ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪವನ್ನು ಇದೇ ಸಂದರ್ಭದಲ್ಲಿ ನೆರವೇರಿಸಲ್ಪಟ್ಟಿತು. ಪವನ್ ಕಿರಣ್ಕೆರೆ, ಶಿಬಿರದ ಬಗ್ಗೆ ಮಾತನಾಡಿದರು. ಶಿಬಿರಾರ್ತಿಗಳ ಪರವಾಗಿ ಶಶಿಕಾಂತ್ ಶೆಟ್ಟಿ, ಸುನಿಲ್ ಹೊಲ್ನಾಡು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎಲ್ಲ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

    ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಮುರಲಿ ಕಡೆಕಾರ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಯಲ್ಲಿ ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು. ಗಿರಿಜಾ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾ ಪ್ರಸಾದ್ ಸಹಕರಿಸಿದರು. ಡಾ. ಅನ್ನಪೂರ್ಣ ಆಚಾರ್ಯರಿಂದ ಯೋಗ ಮತ್ತು ಕಾರ್ಯದರ್ಶಿಯಿಂದ ಕಲಾರಂಗದ ಬೆಳವಣಿಗೆ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲ್ಪಟ್ಟಿತು. ಬಳಿಕ ಎರಡೂವರೆ ಗಂಟೆಗಳ ಕಾಲ ಶತಾವಧಾನಿಗಳೊಂದಿಗೆ ಅರ್ಥಪೂರ್ಣ ಸಂವಾದ ನಡೆಯಿತು. ಊಟದ ಬಳಿಕ ವಾಸುದೇವರಂಗ ಭಟ್ ಮಾತನಾಡಿದರು. ಬಳಿಕ ಎಲ್ಲ ಕಲಾವಿದರು ಶಿಬಿರದ ತಮ್ಮ ಅನುಭವಗಳನ್ನು ಹಂಚಿಕೊಂಡರು.

    award baikady felicitation Literature roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ
    Next Article ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.