ಉಡುಪಿ : ಯಕ್ಷಗಾನ ಕಲಾರಂಗ (ರಿ.) ಉಡುಪಿ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಭೀಮ ಗೋಲ್ಡ್ ಪ್ರೈ.ಲಿ. ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಭೀಮ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2026’ ಇದರ ಸಮಾರೋಪ ಸಮಾರಂಭವನ್ನು ದಿನಾಂಕ 14 ಏಪ್ರಿಲ್ 2026ರಂದು ಅಪರಾಹ್ನ 3-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಗುರುರಾಜ ಗಂಟಿಹೊಳೆ ಇವರು ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

