ಪುತ್ತೂರು: ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ನಾಟಕ ತರಬೇತಿ ‘ರಂಗ ನಟನಾ’ ಇದರ ಸಮಾರೋಪ ಸಮಾರಂಭ ದಿನಾಂಕ 22-03-2024ರ ಶುಕ್ರವಾರದಂದು ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಯದು ವಿಟ್ಲ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಯಶಸ್ಸನ್ನು ಕೋರಿದರು. ಶಾಲಾ ಸಹಶಿಕ್ಷಕಿ ಸೌಮ್ಯ ಸ್ವಾಗತಿಸಿ, ಕವಿತಾ ಸತೀಶ್ ಕಾರ್ಯಕ್ರಮ ನಿರ್ವಹಿಸಿ, ಜ್ಯೋತಿ ಲಕ್ಷ್ಮೀ ವಂದಿಸಿದರು.
ಬಳಿಕ ಶಾಲಾ ಮುಖ್ಯ ಗುರುಗಳ ಮಾರ್ಗದರ್ಶನದಲ್ಲಿ ಶಾಲಾ ಕಲಾ ಶಿಕ್ಷಕ ಕಾರ್ತಿಕ್ ಕುಮಾರ್ ವಿಟ್ಲ ಅವರ ಸಾರಥ್ಯದಲ್ಲಿ ‘ರಂಗ ನಟನಾ’ ನಾಟಕ ತರಗತಿಯ ವಿದ್ಯಾರ್ಥಿಗಳಿಂದ ‘ವೀರ ಸಾವರ್ಕರ್’, ‘ಹನುಮನ ಉಸಿರಲ್ಲಿ ರಾಮ’ ಹಾಗೂ ‘ಹರಿದ್ವರ್ಣ’ ಎಂಬ ಮೂರು ಕಿರು ನಾಟಕಗಳು ಪ್ರದರ್ಶನಗೊಂಡವು.


ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರು, ಪ್ರಾಥಮಿಕ ವಿಭಾಗ ಮುಖ್ಯ ಶಿಕ್ಷಕಿ ಸಂಧ್ಯಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಮಮತಾ, ಶಾಲಾ ಶಿಕ್ಷಕರು, ಮಕ್ಕಳು ಹಾಗೂ ಪೋಷಕ ಬಂಧುಗಳು ಉಪಸ್ಥಿತರಿದ್ದರು.