ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ನಡೆದ ಯಕ್ಷಗಾನ ತಾಳಮದ್ದಳೆ ದಶಾಹದ ಸಮಾರೋಪ ಸಮಾರಂಭ ದಿನಾಂಕ 27 ಜುಲೈ 2025ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಎಲ್. ಧರ್ಮ ಮಾತನಾಡಿ “ಕರಾವಳಿಯ ಗಂಡುಮೆಟ್ಟಿದ ಕಲೆ ಯಕ್ಷಗಾನ ಮನರಂಜನೆ ಜತೆಗೆ ಕಲಾವಿದರಿಗೆ ಜೀವನ ಕಟ್ಟಿಕೊಟ್ಟ ಕಲಾ ಪ್ರಾಕಾರವಾಗಿದೆ” ಎಂದು ಹೇಳಿದರು.
ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಯಮಿ ಕೆ. ಕೆ. ಶೆಟ್ಟಿ, ಜ್ಯೋತಿಷಿ ಪದ್ಮನಾಭ ಎಲ್. ಶರ್ಮ ಇರಿಞಾಲಕುಡ ಅತಿಥಿಯಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಬಡಗುತಿಟ್ಟಿನ ಹಿರಿಯ ಭಾಗವತ ಕೊಳಗಿ ಕೇಶವ ಹೆಗಡೆ ಅವರನ್ನು ಸ್ವಾಮೀಜಿ ಸನ್ಮಾನಿಸಿದರು. ಕಲಾವಿದ ವಾಸುದೇವ ರಂಗ ಭಟ್ಟ ಅವರನ್ನು ಸ್ವಾಮೀಜಿ ಆಶೀರ್ವದಿಸಿದರು. ಶ್ರೀಮಠದ ವ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಸ್ವಾಗತಿಸಿ, ಪ್ರತಿಷ್ಠಾನದ ಸದಸ್ಯ ಸೇರಾಜೆ ಸತ್ಯನಾರಾಯಣ ಭಟ್ಟ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ‘ಕೃಷ್ಣ ಸಂಧಾನ’ ಯಕ್ಷಗಾನ ತಾಳಮದ್ದಳೆ ಜರುಗಿತು.
Subscribe to Updates
Get the latest creative news from FooBar about art, design and business.