ಶಿರ್ವ : ಶಿರ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭವು ದಿನಾಂಕ 17 ಡಿಸೆಂಬರ್ 2024ರಂದು ಶಿರ್ವದ ಮಹಿಳಾ ಸೌಧದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶೀರ್ವ ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿಯಾದ ಭಾಸ್ಕರ ಶೆಟ್ಟಿ ಇವರು ಭಾಗವಹಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ಪ್ರಮಾಣ ಪತ್ರ ಮತ್ತು ಗುಂಪಿನ ಭಾವಚಿತ್ರ ವಿತರಿಸಿದರು. ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎ. ಗಂಗಾಧರ್ ರಾವ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರ್ ಪ್ರಸಾದ್ ಶೆಟ್ಟಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ವಿಠಲ ಬಿ. ಅಂಚನ್ ಭಾಗವಹಿಸಿದರು.
ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಶ್ರೀಪತಿ ಕಾಮತ್ ಸ್ವಾಗತಿಸಿ, ಟ್ರಸ್ಟಿನ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡಿ, ಪ್ರದರ್ಶನ ಸಂಘಟನಾ ಸಮಿತಿಯ ಸದಸ್ಯರಾದ ಅನಂತ ಮುಡಿತ್ತಾಯರು ಕಾರ್ಯಕ್ರಮ ನಿರೂಪಿಸಿ, ನಾರಾಯಣ ಎಂ. ಹೆಗಡೆ ಧನ್ಯವಾದ ಸಲ್ಲಿಸಿದರು.
Subscribe to Updates
Get the latest creative news from FooBar about art, design and business.
Previous Article‘ಎಸ್. ಡಿ. ಎಂ. ಯಕ್ಷೋತ್ಸವ’ ನೂತನ ಸಮಿತಿಗೆ ಚಾಲನೆ
Related Posts
Comments are closed.