Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಶ್ರೀಕೃಷ್ಣ ಮಾಸೋತ್ಸವ’ದ ಸಮಾರೋಪ | ಸೆಪ್ಟೆಂಬರ್ 1
    Cultural

    ‘ಶ್ರೀಕೃಷ್ಣ ಮಾಸೋತ್ಸವ’ದ ಸಮಾರೋಪ | ಸೆಪ್ಟೆಂಬರ್ 1

    August 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀಸುಶೀಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 01 ಆಗಸ್ಟ್ 2024 ರಂದು ಆರಂಭಗೊಂಡ ಶ್ರೀಕೃಷ್ಣ ಮಾಸೋತ್ಸವದ ಸಮಾರೋಪ ಸಮಾರಂಭವು ದಿನಾಂಕ 01 ಸೆಪ್ಟೆಂಬರ್ 2024ರಂದು ಸಮಾರೋಪಗೊಳ್ಳಲಿದ್ದು, ಅಂದು ಶ್ರೀಕೃಷ್ಣನಿಗೆ ‘ಉದಯಾಸ್ತಮಾನ ಸೇವೆ’ ನಡೆಯಲಿದೆ.

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸರಿಗಮಪ ಸೀಸನ್-15ರ ರನ್ನರ್ ಅಪ್ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಅವರಿಂದ ಬೆಳಗ್ಗೆ ಘಂಟೆ 10.00 ರಿಂದ 12.00ರ ವರೆಗೆ ಶಾಸ್ತ್ರೀಯ ಸಂಗೀತ ಕಛೇರಿ ,ಅಪರಾಹ್ನ ಘಂಟೆ 3.00 ರಿಂದ 5.00ರ ವರೆಗೆ ಸಂಯುಕ್ತ ಸಂಸ್ಥಾನ (ಯು. ಕೆ.) ಇಲ್ಲಿನ ನೃತ್ಯ ನಿರ್ದೇಶಕಿ ದಿವ್ಯಾ ಭಟ್ ಇವರಿಂದ ಕಥಕ್ ನೃತ್ಯ ಹಾಗೂ ರಾತ್ರಿ ಘಂಟೆ 7.00 ರಿಂದ 9.00ರ ವರೆಗೆ ಸ್ವೀಡನ್‌ ಇಲ್ಲಿನ ವಿದುಷಿ ದಿವ್ಯಾ ಸುರೇಶ್ ಇವರಿಂದ ಭರತನಾಟ್ಯ ಪ್ರದರ್ಶನ ಗೊಳ್ಳಲಿದೆ.

    ಅಂದು ಸಂಜೆ ಘಂಟೆ 5.00 ರಿಂದ ರಾಜಾಂಗಣದಲ್ಲಿ ನಡೆಯಲಿರುವ ಶ್ರೀಕೃಷ್ಣ ಮಾಸೋತ್ಸವ ಸಮಾರೋಪ ಸಮಾರಂಭದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಮಾಹೆ ಇದರ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್, ಮಾಜಿ ಶಾಸಕ ರಘುಪತಿ ಭಟ್, ಶಾಸಕರಾದ ಯಶ್‌ಪಾಲ್ ಸುವರ್ಣ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಅತಿಥಿಗಳಾಗಿ ಉಪಸ್ಥಿತಲಿರುವರು.
    ಇದೇ ಸಂದರ್ಭದಲ್ಲಿ ಪಡುಬಿದ್ರಿ ತರಂಗಿಣಿ ಮಿತ್ರ ಮಂಡಳಿಯ ಹರೀಶ್ ಭಟ್ ಹಾಗೂ ಪ್ರಭಾಕರ ಅಡಿಗ ಮಂಗಳೂರು ಇವರಿಗೆ ‘ಶ್ರೀಕೃಷ್ಣಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಕಾಷ್ಠ ಶಿಲ್ಪಿ ಮುರುವ ಮಾಣಿಲದ ನಾರಾಯಣ ಆಚಾರ್ಯ ಇನ್ನಿಲ್ಲ
    Next Article ‘ಸ್ಪಂದನ ಸಿರಿ’ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
    roovari

    Comments are closed.

    Related Posts

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಗೋಕುಲಂ ಗೋಶಾಲಾ ವೇದಿಕೆಯಲ್ಲಿ ಕಲಾಕುಟುಂಬದ ನೃತ್ಯಾರ್ಚನೆ

    May 12, 2026

    ಭಕ್ತಿಯ ಪರಾಕಾಷ್ಠೆ ಮೆರೆದ ರಚನಾ ನಾರಾಯಣನ್‌ಕುಟ್ಟಿ ಇವರ ಕುಚಿಪುಡಿ ನೃತ್ಯ ವೈಭವ

    May 12, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.