Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭ  
    Competition

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭ  

    February 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಲಾದ 32ನೇ ವರ್ಷದ ‘ಯಕ್ಷೋತ್ಸವ’ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭವು ದಿನಾಂಕ 25-02-2024ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.
    ಈ ಸಮಾರಂಭದಲ್ಲಿ ಯಕ್ಷಗಾನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಆಡಳಿತಾತ್ಮಕ ಸದಸ್ಯ ಶ್ಯಾಮ್ ಭಟ್ ಇವರು ಮಾತನಾಡುತ್ತಾ “ವಿದ್ಯಾವಂತ ಸಮಾಜ ಯಕ್ಷಗಾನ ಕ್ಷೇತ್ರದತ್ತ ಒಲವು ಹೊಂದಿರುವುದು ಉತ್ತಮ ವಿಚಾರ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಲೆ ಉಳಿಸಲು ಮುಂದಾಗಿರುವುದು ಅವುಗಳ ಶ್ರೀಮಂತಿಕೆಯನ್ನು ವಿವರಿಸುತ್ತಿದ್ದು. ವಿದ್ಯಾರ್ಥಿಗಳ ಕಲಾ ಜೀವನ ಯಶಸ್ವಿಯಾಗಲಿ. ಹಿಂದಿನ ಕಾಲದಲ್ಲಿ ವಿದ್ಯಾಭ್ಯಾಸ ಮುಂದುವರಿಸಲಾಗದವರು ಯಕ್ಷಗಾನ ಕ್ಷೇತ್ರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಇಂದು ಚಿತ್ರಣವೇ ಬದಲಾಗಿದ್ದು, ವಿದ್ಯಾವಂತರು ಯಕ್ಷಗಾನದಲ್ಲಿ ಹೆಚ್ಚು ಭಾಗವಹಿಸುತ್ತಿರುವುದು ಕಲೆಯ ಬೆಳವಣಿಗೆಗೆ ಪೂರಕ. ಮೂವತ್ತೆರಡು ವರ್ಷಗಳ ಹಿಂದೆಯೇ ಯಕ್ಷಗಾನ ಸ್ಪರ್ಧೆಯನ್ನು ಆರಂಭಿಸಿರುವುದು ಸಂಸ್ಥೆಗೆ ಹಿರಿಮೆ ತಂದಿದೆ. ಎಲ್ಲಾ ತಂಡಗಳು ಒಂದೇ ಪ್ರಸಂಗವನ್ನು ಪ್ರದರ್ಶಿಸಿರುವ ಕಾರಣ ತೀರ್ಪುಗಾರಿಕೆಗೆ ನೆರವಾಗಿದೆ. ಶಾಲಾ ಕಾಲೇಜುಗಳಲ್ಲಿ ಯಕ್ಷಗಾನ ಕಲಿಯುವುದು, ಕಲೆಯತ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗಲು ಕಾರಣವಾಗುತ್ತದೆ. ಉದ್ಯೋಗದ ಬಗ್ಗೆ ಹೆಚ್ಚು ಚಿಂತಿಸದೆ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರಿಂದ ಗೌರವ, ಗುರುತಿಸುವಿಕೆಯ ಜೀವನ ನಡೆಸಲು ಸಾಧ್ಯ” ಎಂದರು.
    ತೀರ್ಪುಗಾರರಾದ ಎಂ.ಕೆ. ಆಚಾರ್ಯ, ಅಂಬಾ ಪ್ರಸಾದ್, ಶ್ಯಾಮ್ ಭಟ್ ಅವರನ್ನು ಸಮ್ಮಾನಿಸಲಾಯಿತು. ಪ್ರಾಂಶುಪಾಲ ಡಾ. ತಾರಾನಾಥ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ದೇವರಾಜ ಟಿ., ಯಕ್ಷೋತ್ಸವ ಸಂಚಾಲಕ ಪುಷ್ಪರಾಜ್ ಕೆ. ಶುಭಹಾರೈಸಿದರು.
    ಸಮಾರೋಪದಲ್ಲಿ ಪ್ರಶಸ್ತಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ನಿಟ್ಟೆ ಎನ್‌.ಎಂ.ಎ.ಎಂ. ಟೆಕ್ನಾಲಜಿ ಸಂಸ್ಥೆ ಪ್ರಥಮ ಸಮಗ್ರ ಪ್ರಶಸ್ತಿ ಗೆದ್ದು ಕೊಂಡಿತ್ತು. ಎಸ್‌.ಡಿ.ಎಂ. ಉಜಿರೆ ಕಾಲೇಜು ದ್ವಿತೀಯ, ಉಡುಪಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಸಂಸ್ಥೆ ತೃತೀಯ ಪ್ರಶಸ್ತಿಗಳನ್ನು ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಥಮ ದರ್ಜೆ ಕಾಲೇಜು ತಂಡ ನಾಲ್ಕು ಹಾಗೂ ಮಂಗಳೂರಿನ ಎಸ್‌.ಡಿ.ಎಂ. ಉದ್ಯಮಾಡಳಿತ ಕಾಲೇಜು ತಂಡ ಐದನೇ ಸ್ಥಾನ ಪಡೆದುಕೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಿನ್ನಿಗೋಳಿಯಲ್ಲಿ ರತ್ನಾ ಟಿ.ಕೆ. ಭಟ್ ಹಾಗೂ ಹಾ.ಮ. ಸತೀಶ ಇವರ ನೂತನ ಕೃತಿಗಳ ಲೋಕಾರ್ಪಣೆ 
    Next Article ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ‘ಉಂಗುರ ಸಂಧಿ’ ತಾಳಮದ್ದಳೆ 
    roovari

    Add Comment Cancel Reply


    Related Posts

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    ಬೆಂಗಳೂರು ಅಲಯೆನ್ಸ್ ವಿಶ್ವವಿದ್ಯಾನಿಲಯದಲ್ಲಿ ತುಳು ಯಕ್ಷಗಾನ ಕಾರ್ಯಾಗಾರ – ವಿಚಾರಗೋಷ್ಠಿ

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.