ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್ ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ ಹಿರಿಯ ರೊಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.
ದಿನಾಂಕ 14 ಏಪ್ರಿಲ್ 2025ರಂದು ಸಂಜೆ ಘಂಟೆ 5.00ಕ್ಕೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿಮರ್ಶಕ ಎಚ್. ಎಸ್. ರಾಘವೇಂದ್ರ ರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಎಂದು ಕೇಂದ್ರದ ಅಧ್ಯಕ್ಷ ಸಿ. ಕೆ. ರಾಮೇಗೌಡ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಮಂಗಳೂರಿನಲ್ಲಿ ಉದ್ಘಾಟನೆಗೊಂಡ ಅರೆಹೊಳೆ ನಾಟಕೋತ್ಸವ
Next Article ಮಂಗಳೂರು ಪುರಭವನದಲ್ಲಿ ‘ಭರತಾಂಜಲಿ ಕಿಂಕಿಣಿ ತ್ರಿಂಶತಿ’