ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ ‘ವರ್ಣಶ್ರೀ’ ಪ್ರಶಸ್ತಿಗೆ ಖ್ಯಾತ ಚಿತ್ರ ಕಲಾವಿದ ಸೈಯ್ಯದ್ ಆಸಿಫ್ ಅಲಿ ಆಯ್ಕೆಯಾಗಿದ್ದಾರೆ.
ಸೈಯದ್ ಆಸಿಫ್ ಮೂಲತಃ ಮಂಗಳೂರಿನವರಾಗಿದ್ದು ಫೈನ್ ಆರ್ಟ್‌ನಲ್ಲಿ ಹೆಸರು ಗಳಿಸಿದ್ದಾರೆ. ಆಧುನಿಕ ಮತ್ತು ಪ್ರಾಚೀನ ಕಲೆಗಳ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿರುವ ಇವರು ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಲೆಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರದರ್ಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಇವರು ಮಂಗಳೂರಿನ ಮಹಾಲಸಾ ಕಾಲೇಜ್ ಆಫ್ ವಿಶುವಲ್ ಆರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.