ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾಗಿದ್ದ ದಿ. ಗೋಪಾಲಕೃಷ್ಣ ಆಸ್ರಣ್ಣ ಸ್ಮರಣಾರ್ಥ ನೀಡಲಾಗುವ 2026ನೇ ಸಾಲಿನ ‘ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ’ಗೆ ಕಟೀಲು ಮೇಳದ ಹಿರಿಯ ಚೆಂಡೆ, ಮದ್ದಳೆ ವಾದಕ ಮಿಜಾರು ಮೋಹನ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.
ಕದ್ರಿಯ ಆಸ್ರಣ್ಣ ಅಭಿಮಾನಿ ಬಳಗ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಮೋಹನ್ ಶೆಟ್ಟಿಗಾರ್ ಇವರನ್ನು ಗೌರವಿಸಲಾಗುವುದು. ಕಟೀಲು ಲಕ್ಷ್ಮೀ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ದಿನಾಂಕ 22 ಆಗಸ್ಟ್ 2026ರ ಶನಿವಾರ ಶ್ರೀ ಗೋಪಾಲಕೃಷ್ಣ ಅಸ್ರಣ್ಣ ಸಭಾಭವನದಲ್ಲಿ ಹಮ್ಮಿಕೊಂಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಸ್ರಣ್ಣ ಅಭಿಮಾನಿ ಬಳಗದ ಪ್ರಮುಖರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಮತ್ತು ಕದ್ರಿ ನವನೀತ ಶೆಟ್ಟಿ ತಿಳಿಸಿದ್ದಾರೆ.

