ಮೈಸೂರು : ಶ್ರೀ ನಟರಾಜ ಪ್ರತಿಷ್ಠಾನ ಮತ್ತು ವಾತ್ಸಲ್ಸ ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಡಾ. ಯಶೋಧರ ಕೆ. ವಿರಚಿತ ‘ವಿಚಾರಧಾರೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 02 ಆಗಸ್ಟ್ 2025ರಂದು ಬೆಳಿಗ್ಗೆ 11-00 ಗಂಟೆಗೆ ನಟರಾಜ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿಗಳಾದ ಡಾ. ಎಸ್. ಶಿವರಾಜಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಇವರು ಗ್ರಂಥ ಬಿಡುಗಡೆ ಮಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಸಿ.ಜಿ. ವೆಂಕಟರಮಣ ಶೆಟ್ಟಿ ಮತ್ತು ಅಧ್ಯಾಪಕರಾದ ಶ್ರೀಮತಿ ಮಾಧುರಿ ಶ್ರೀರಾಮ್ ಇವರುಗಳು ಕೃತಿ ಕುರಿತು ಮಾತನಾಡಲಿದ್ದಾರೆ.